Breaking News
Home / Uncategorized / ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಕೊವಿಡ್​ ಸೋಂಕಿನಿಂದ ಸಾವು

ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಕೊವಿಡ್​ ಸೋಂಕಿನಿಂದ ಸಾವು

Spread the love

ದೆಹಲಿಯ ಟಿಕ್ರಿ ಗಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮಬಂಗಾಳದಿಂದ ತೆರಳುತ್ತಿದ್ದ 26ವರ್ಷದ ಹೋರಾಟಗಾರ್ತಿಯೊಬ್ಬಳನ್ನು, ಅವಳ ಜತೆಗಿದ್ದ ಇಬ್ಬರು ಅತ್ಯಾಚಾರ ಮಾಡಿದ್ದರು. ಈ ಅತ್ಯಾಚಾರ ಸಂತ್ರಸ್ತೆ ಇದೀಗ ಕೊವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

 

ಇದು ತುಸು ಹಳೇ ಘಟನೆಯಾಗಿದ್ದು, ಇದೀಗ ಬೆಳಕಿಗೆ ಬಂದಿದೆ. ಏಪ್ರಿಲ್​ 11ರಂದು ಈ ಯುವತಿ, ಇನ್ನಿಬ್ಬರೊಂದಿಗೆ ದೆಹಲಿ ಗಡಿಗೆ ತೆರಳುತ್ತಿದ್ದರು. ಆದರೆ ದುರ್ದೈವವೆಂಬಂತೆ ಜತೆಗಿದ್ದವರಿಂದಲೇ ರೇಪ್​​ಗೆ ಒಳಗಾಗಿದ್ದರು. ಈ ಬಗ್ಗೆ ಆಕೆಯ ತಂದೆ ಪೊಲೀಸರಿಗೆ ದೂರು ಕೂಡ ನೀಡಿದ್ದರು. ಅದಾದ ಕೆಲವೇ ದಿನಗಳಲ್ಲಿ ಆಕೆಯಲ್ಲಿ ಕೊವಿಡ್ 19 ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭವಾಗಿತ್ತು. ಹಾಗಾಗಿ ಏಪ್ರಿಲ್​ 26ರಂದು ಶಿವಮ್​ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಲ್ಲಿ ಕೊವಿಡ್ ದೃಢಪಟ್ಟಿತ್ತು. ಅದಾದ ನಾಲ್ಕೇ ದಿನಗಳಲ್ಲಿ ಅಂದರೆ ಏಪ್ರಿಲ್​ 30ರಂದು ಕೊನೆಯುಸಿರೆಳಿದಿದ್ದಾರೆ.

ಯುವತಿಯ ಮರಣಕ್ಕೆ ಸಂಯುಕ್ತ ಕಿಸಾನ್​ ಮೋರ್ಚಾ ಸಂತಾಪ ವ್ಯಕ್ತಪಡಿಸಿದೆ. ಹಾಗೇ ಆಕೆಗೆ ನ್ಯಾಯ ಸಿಗಬೇಕು, ಈ ಹೋರಾಟದಲ್ಲಿ ನಾವು ದೃಢವಾಗಿ ನಿಲ್ಲುತ್ತೇವೆ ಎಂದು ಹೇಳಿದೆ.

ನಮ್ಮ ಸಂಘಟನೆಯ ಹೋರಾಟಗಾರ್ತಿಯ ಮೇಲೆ ಅತ್ಯಾಚಾರ ಆಗಿದ್ದು ದುರಂತ ಎಂದು ಹೇಳಿರುವ ಎಸ್​ಕೆಎಂ ನಾಲ್ಕು ದಿನಗಳ ಹಿಂದೆಯೇ ಟಿಕ್ರಿ ಗಡಿಯಲ್ಲಿರುವ ಕಿಸಾನ್ ಸೋಷಿಯಲ್ ಆರ್ಮಿ ಎಂದು ಬರೆದುಕೊಂಡಿದ್ದ ದೊಡ್ಡ ಬ್ಯಾನರ್​, ಟೆಂಟ್​ಗಳನ್ನೆಲ್ಲ ತೆಗೆದುಹಾಕಿದೆ. ಇನ್ನು ಅತ್ಯಾಚಾರದ ಆರೋಪಿಗಳನ್ನು ಚಳುವಳಿಯಿಂದ ಅದಾಗಲೇ ದೂರವಿಟ್ಟಿರುವ ಸಂಘಟನೆ, ಅವರಿಗೆ ಸಾರ್ವಜನಿಕ ಬಹಿಷ್ಕಾರ ಹಾಕುವಂತೆ ಜನರಲ್ಲಿ ಮನವಿಯನ್ನೂ ಮಾಡಿದೆ.

 


Spread the love

About Laxminews 24x7

Check Also

ರೇವಣ್ಣ ನಡವಳಿಕೆ ಸರಿಯಿಲ್ಲ, ಇಂಗ್ಲೆಂಡ್ ನಲ್ಲೂ ತಗಲಾಕೊಂಡಿದ್ದರು : ಮಾಜಿ ಸಂಸದ ಶಿವರಾಮೇಗೌಡ ಗಂಭೀರ ಆರೋಪ

Spread the loveಮಂಡ್ಯ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಸಂಕಷ್ಟದಲ್ಲಿದ್ದು ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ