Breaking News

ಬಡವರು, ವಲಸಿಗರು, ಕೂಲಿ ಕಾರ್ಮಿಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಮೇ 24 ರವರೆಗೆ ಉಚಿತ ಊಟ, ತಿಂಡಿ, ಇಂದಿರಾ ಕ್ಯಾಂಟೀನ್ ನಲ್ಲಿ ಮೂರು ಹೊತ್ತು ಆಹಾರ

Spread the love

ಬೆಂಗಳೂರು: ಲಾಕ್ಡೌನ್ ಅವಧಿಯಲ್ಲಿ ಬಡವರು, ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಉಚಿತವಾಗಿ ಆಹಾರ ಒದಗಿಸಲು ಆದೇಶಿಸಲಾಗಿದೆ.

ಕೂಲಿ ಕಾರ್ಮಿಕರು, ಬಡವರು, ವಲಸಿಗರು, ದುರ್ಬಲ ವರ್ಗದವರಿಗೆ ಹಸಿವು ನೀಗಿಸಲು ಮೇ 24 ರ ವರೆಗೆ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ಆಹಾರ ಒದಗಿಸಲಾಗುವುದು.

ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿರುವ 170ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್ ಗಳು, ಬೆಂಗಳೂರಿನಲ್ಲಿರುವ 150 ಕ್ಕೂ ಅಧಿಕ ಇಂದಿರಾ ಕ್ಯಾಂಟೀನ್ ಗಳು ಮತ್ತು 30 ಕ್ಕೂ ಅಧಿಕ ಮೊಬೈಲ್ ಕ್ಯಾಂಟೀನ್ ಗಳಲ್ಲಿ ಲಾಕ್ಡೌನ್ ಮುಗಿಯುವವರೆಗೆ ಉಚಿತವಾಗಿ ಆಹಾರ ಒದಗಿಸಲು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಆಹಾರ ಪೂರೈಕೆ ಸಂಬಂಧ ಗುತ್ತಿಗೆದಾರರಿಗೆ ಬಾಕಿ ಪಾವತಿಸಲು ಸೂಚನೆ ನೀಡಲಾಗಿದೆ. ಮೇ 24 ರವರೆಗೆ ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಉಚಿತವಾಗಿ ಆಹಾರ ಪೂರೈಕೆ ಮಾಡಲಾಗುವುದು ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ