Breaking News

ಕೊರೊನಾ ಎರದನೆ ಅಲೆ ನಿಯಂತ್ರಣಕ್ಕೆ 6-8 ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ?:I.C.M.R.

Spread the love

ನವದೆಹಲಿ: ಕೊರೊನಾ ಎರದನೆ ಅಲೆ ನಿಯಂತ್ರಣಕ್ಕೆ 6-8 ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿಮಾಡಬೇಕು ಎಂದು ಐಸಿಎಂಆರ್ (ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ) ಕೇಂದ್ರ ಸರ್ಕಾರಕ್ಕೆ ಸಲಹೆ ನಿಡಿದೆ.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಮುಂದಿನ 6-8 ವಾರಗಳ ಕಾಲ ಲಾಕ್ ಡೌನ್ ಜಾರಿ ಮಾಡುವುದು ಒಳ್ಳೆಯದು. ಕೊರೊನಾ ಚೈನ್ ಲಿಂಕ್ ಬ್ರೇಕ್ ಮಾಡಲು ಲಾಕ್ ಡೌನ್ ಅಗತ್ಯವಿದೆ ಎಂದು ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಭಾರ್ಗವ ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ 718 ಜಿಲ್ಲೆಗಳಲ್ಲಿ ಕೋವಿಡ್ ಟೆಸ್ಟ್ ಗೆ ಒಳಗಾದ ಶೇ.10ಕ್ಕಿಂತ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ದೆಹಲಿ, ಮುಂಬೈ, ಬೆಂಗಳೂರು ನಗರಗಳು ಅಪಾಯದಲ್ಲಿವೆ. ಪಾಸಿಟಿವಿಟಿ ಪ್ರಮಾಣ ಶೇ.10ರಿಂದ ಶೇ.5ಕ್ಕೆ ಬಂದಾಗ ಲಾಕ್ ಡೌನ್ ನಿಯಮ ಸಡಿಲಿಸಬಹುದು. ಈ ಪ್ರಮಾಣಕ್ಕೆ ಬರಲು 6-8 ವಾರಗಳಾದರೂ ಬೇಕು. ಹೀಗಾಗಿ 6-8 ವಾರಗಳ ಕಾಲ ದೇಶದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ