Breaking News

ಕರ್ತವ್ಯನಿರತ ಪೊಲೀಸರ ಮೇಲೆ ಹರಿದ ಲಾರಿ; ಇಬ್ಬರು ಸಾವು

Spread the love

ವಿಜಯವಾಡ: ಲಾರಿ ಹರಿದು ಕರ್ತವ್ಯನಿರತ ಪೊಲೀಸರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.ಮುಖ್ಯ ಪೊಲೀಸ್​ ಪೇದೆ ಸತ್ಯನಾರಾಯಣ ಮತ್ತು ಹೋಮ್​ ಗಾರ್ಡ್​ ಎನ್​. ಎಸ್​. ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಕಾಕಿನಾಡದ ತಿಮ್ಮಾಪುರಂ ಪೊಲೀಸ್​ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ವಿಜಯವಾಡದಿಂದ ಬರುತ್ತಿದ್ದ ಲಸಿಕಾ ವಾಹನದ ಬೆಂಗಾವಲು ಸೇವೆಯಲ್ಲಿದ್ದರು.

ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಇಬ್ಬರ ಮೇಲೆ ಹರಿದಿದ್ದು, ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಮತ್ತು ಕ್ಲೀನರ್​ ಪರಾರಿ ಆಗಿದ್ದಾರೆ. ಘಟನಾ ಸ್ಥಳಕ್ಕೆ ಕಾಕಿನಾಡ ಡಿಎಸ್​ಪಿ ಭೀಮಾರಾವ್​ ಮತ್ತು ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಅಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಕಾಕಿನಾಡ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ