Breaking News

ಜನಿ ಪುತ್ರಿಯಿಂದ ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ

Spread the love

ಚೆನ್ನೈ: ಕಾಲಿವುಡ್ ನಟ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಸೌಂದರ್ಯ ರಜನಿಕಾಂತ್ ಹಾಗೂ ಅವರ ಕುಟುಂಬಸ್ಥರು ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಈ ವಿಚಾರವನ್ನು ಸೌಂದರ್ಯ ರಜನಿಕಾಂತ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸೌಂದರ್ಯ ರಜನಿಕಾಂತ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ನನ್ನ ಮಾವ ಶ್ರೀ ಎಸ್.ಎಸ್. ವನಂಗಮುಡಿ, ಪತಿ ವಿಶಾಗನ್, ಅವರ ಸಹೋದರಿ ಮತ್ತು ನಾನು ಇಂದು ಬೆಳಗ್ಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‍ರವರನ್ನು ಭೇಟಿ ಮಾಡಿ 1 ಕೋಟಿ ರೂವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದೇವೆ ಎಂದು ಹೇಳಿದ್ದಾರೆ.ನಟ ಸೂಪರ್ ಸ್ಟಾರ್ ರಜನಿಕಾಂತ್‍ರವರು ಗುರುವಾರ ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್‍ನನ್ನು ಪಡೆದಿದ್ದರು. ಈ ಫೋಟೋವನ್ನು ಕೂಡ ಸೌಂದರ್ಯ ರಜನಿಕಾಂತ್‍ರವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ