Breaking News

ದೇಶದ ಕೊರೊನಾ ಸ್ಥಿತಿ ಕಂಡು ಆತಂಕ ವ್ಯಕ್ತಪಡಿಸುತ್ತಿರುವ ವಿಶ್ವ ಸಂಸ್ಥೆ!

Spread the love

ನವದೆಹಲಿ : ಭಾರತ ದೇಶದಲ್ಲಿ ಕೊರೊನಾ ಸ್ಥಿತಿ ಭೀಕರವಾಗುತ್ತಿದೆ. ಅಲ್ಲಿನ ಕೆಲವು ರಾಜ್ಯಗಳಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಪ್ರಕರಣಗಳು ಆತಂಕ ಮೂಡಿಸುತ್ತಿವೆ. ಇದನ್ನು ಗಮನಿಸಿದರೆ ಎರಡನೇ ವರ್ಷ ಇನ್ನೂ ಭಯನಕವಾಗಿರುವ ಬಗ್ಗೆ ಎಚ್ಚರಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್‌ಒ) ಆತಂಕ ವ್ಯಕ್ತಪಡಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಈ ಕುರಿತು ಮಾತನಾಡಿ, ಭಾರತದ ಪರಿಸ್ಥಿತಿಗೆ ವಿಶ್ವ ಸಂಸ್ಥೆ ಸ್ಪಂದಿಸುತ್ತಿದೆ. ಸಾವಿರಾರು ಆಕ್ಸಿಜನ್ ಕಾನ್ಸಟ್ರೇಟರ್ ಗಳು, ಮೊಬೈಲ್ ಫೀಲ್ಡ್ ಹಾಸ್ಪಿಟಲ್‍ ಗಳಿಗಾಗಿ ಟೆಂಟ್ಗಸಳು, ಮಾಸ್ಕ್ ಹಾಗೂ ಇತರೆ ವೈದ್ಯಕೀಯ ಪರಿಕರಗಳನ್ನು ಪೂರೈಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಭಾರತವು ಇನ್ನೂ ಮಹಾಮಾರಿ ವಿರುದ್ಧ ಹೋರಾಡಬೇಕಾದ ಅಗತ್ಯವಿದೆ. ಹಲವು ರಾಜ್ಯಗಳಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಚಿಂತೆಗೀಡು ಮಾಡುತ್ತಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವುದು ಹಾಗೂ ಸಾವುಗಳನ್ನು ನೋಡಿದರೆ ಭಯವಾಗುತ್ತಿದೆ. ಭಾರತಕ್ಕೆ ಬೆಂಬಲ ನೀಡುತ್ತಿರುವ ದೇಶಗಳಿಗೆ ವಿಶ್ವ ಸಂಸ್ಥೆ ಧನ್ಯವಾದ ಅರ್ಪಿಸುತ್ತದೆ ಎಂದು ಹೇಳಿದ್ದಾರೆ.

ಈ ಪರಿಸ್ಥಿತಿ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ನೇಪಾಳ, ಶ್ರೀಲಂಕಾ, ವಿಯಟ್ನಾಂ, ಕಾಂಬೋಡಿಯಾ, ಥೈಲ್ಯಾಂಡ್ ಹಾಗೂ ಈಜಿಪ್ಟ್ ದೇಶಗಳಲ್ಲಿ ಕೂಡ ಇದೆ ಎಂದು ವಿಶ್ವ ಸಂಸ್ಥೆ ಹೇಳಿದೆ.


Spread the love

About Laxminews 24x7

Check Also

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

Spread the love ನವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ