Breaking News

ಮೈಸೂರು ಡಿಸಿ ರೋಹಿಣಿ ಸಿಂಧೂರಿ ಕುಟುಂಬದ ಎಲ್ಲರಿಗೂ ಕೊರೊನಾ ಸೋಂಕು

Spread the love

ಮೈಸೂರು, : ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಇಡೀ ಕುಟುಂಬದ ಸದಸ್ಯರಿಗೆ ಕೊರೊನಾ ವೈರಸ್ ಪಾಸಿಟಿವ್ ಆಗಿದ್ದು, ಡಿಸಿ ರೋಹಿಣಿ ಸಿಂಧೂರಿ ಅವರಿಗೆ ಮಾತ್ರ ನೆಗೆಟಿವ್ ವರದಿ ಬಂದಿದೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ತಂದೆ-ತಾಯಿ, ಅತ್ತೆ-ಮಾವ ಹಾಗೂ ಪತಿ ಎಲ್ಲರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಎಲ್ಲರೂ ಹೋಂ ಐಸೋಲೇಷನ್‍ನಲ್ಲಿದ್ದಾರೆ. ಕುಟುಂಬಸ್ಥರಿಗೆಲ್ಲ ಪಾಸಿಟಿವ್ ಆಗಿದ್ದರಿಂದ ಡಿಸಿ ರೋಹಿಣಿ ಸಹ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು, ವರದಿ ನೆಗೆಟಿವ್ ಬಂದಿದೆ.

ಹೀಗಾಗಿ ಎಲ್ಲರಿಗೂ ಪಾಸಿಟಿವ್ ಆದರೂ ಇವರಿಗೆ ಮಾತ್ರ ಕೊರೊನಾ ನೆಗೆಟಿವ್ ಆಗಿದೆ.ಮುಂಜಾಗ್ರತೆ ವಹಿಸಿದ ಕಾರಣ ಕುಟುಂಬಸ್ಥರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಎಲ್ಲರೂ ಹೋಮ್ ಐಸೋಲೇಶನ್‍ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲೆಯಲ್ಲಿ ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದು, ದಣಿವರಿಯದೆ ಕೆಲಸ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ