ಬೆಳಗಾವಿ: ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ. ಸೋಂಕಿತರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚುತ್ತಿದೆ. ಅಲ್ಲದೇ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಾಗಿ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಕೊವಿಡ್ ಕೇರ್ ಸೆಂಟರ್ ವ್ಯವಸ್ಥೆ ಕೂಡ ಮಾಡುತ್ತಿದೆ. ಅಷ್ಟೇ ಅಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಆಕ್ಸಿಜನ್ ವ್ಯವಸ್ಥೆ ಮಾಡುತ್ತಿದ್ದಾರೆ. ಆದರೆ ಕೊರೊನಾ ಸೋಂಕಿತರಿಗೆ ಮಾತ್ರ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಈ ರೀತಿಯ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದ್ದು, ವೃದ್ಧರೊಬ್ಬರಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ನೇಸರಗಿ ಮೂಲದ ನಾಗಭೂಷಣ ಸಂಪಗಾವಿ (73) ಎಂಬ ವೃದ್ಧ ಉಸಿರಾಟ ಸಮಸ್ಯೆಯಿಂದ ರಸ್ತೆಯಲ್ಲೇ ನರಳಾಡಿದ್ದಾರೆ.
Laxmi News 24×7