Breaking News
Home / Uncategorized / ಕೋವಿಡ್ ಕೇರ್ ಸೆಂಟರನ್ನು ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟನೆ ಮಾಡಿದರು

ಕೋವಿಡ್ ಕೇರ್ ಸೆಂಟರನ್ನು ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟನೆ ಮಾಡಿದರು

Spread the love

ದಾವಣಗೆರೆ: ಕೋವಿಡ್ ಸೋಂಕಿತರಿಗಾಗಿ ದಾವಣಗೆರೆ-ಶಿರಮಗೊಂಡನಹಳ್ಳಿ ಮಾರ್ಗದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ವ್ಯವಸ್ಥೆಗೊಳಿಸಲಾಗಿದ್ದು, ಶನಿವಾರ ಸಂಸದ ಜಿ.ಎಂ. ಸಿದ್ದೇಶ್ವರ ಅದಕ್ಕೆ ಚಾಲನೆ ನೀಡಿದರು.

‘ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿತರಿಂದ ಇತರರಿಗೆ ರೋಗ ಹರಡುವುದನ್ನು ತಡೆಗಟ್ಟಲು ಜಿಲ್ಲೆಯಲ್ಲಿ ವಿವಿಧೆಡೆ ವ್ಯವಸ್ಥಿತವಾಗಿ ಕೋವಿಡ್ ಕೇರ್ ಸೆಂಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ. ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ತರಳಬಾಳು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಮನವಿ ಮಾಡಲಾಯಿತು. ಸ್ವಾಮೀಜಿ ತಕ್ಷಣ ಒಪ್ಪಿ, ಎಲ್ಲ ಸಹಕಾರ ನೀಡಿದ್ದಾರೆ ಎಂದು ಸಂಸದರು ತಿಳಿಸಿದರು.
ತರಳಬಾಳು ವಸತಿ ನಿಲಯದ 30 ಕೊಠಡಿಗಳನ್ನು ಒದಗಿಸಿದ್ದು, ಪ್ರತಿ ಕೊಠಡಿಯಲ್ಲಿ 03 ಬೆಡ್ ವ್ಯವಸ್ಥೆ ಇದೆ. ಹೀಗಾಗಿ ಒಟ್ಟು 90 ಜನರಿಗೆ ಕೋವಿಡ್ ಕೇರ್ ಸೆಂಟರ್‌ಲ್ಲಿ ಸ್ಥಳಾವಕಾಶ ಕಲ್ಪಿಸಬಹುದಾಗಿದೆ. ಬಿಸಿನೀರು, ಉತ್ತಮ ಊಟೋಪಾಹಾರದ ವ್ಯವಸ್ಥೆ ಒದಗಿಸಲಾಗುವುದು. ಕೋವಿಡ್ ಸೋಂಕಿಗೆ ಒಳಗಾಗಿ, ಮನೆಯಲ್ಲಿ ಒಂದೇ ಶೌಚಾಲಯ, ಬಾತ್‍ರೂಂ ಹೊಂದಿರುವವರು ಹೋಂ ಐಸೋಲೇಷನ್‌ನಲ್ಲಿ ಇದ್ದರೆ ಬೇರೆಯವರಿಗೆ ಕೊರೊನಾ ಸೋಂಕು ಬರುವ ಸಾಧ್ಯತೆ ಹೆಚ್ಚು. ಅದಕ್ಕಾಗಿ ಪಾಸಿಟಿವ್‌ ಇದ್ದು, ರೋಗ ಲಕ್ಷಣ ಇಲ್ಲದವರು ಕೋವಿಡ್‌ ಕೇರ್‌ ಸೆಂಟರ್‌ಗೆ ಬರಬೇಕು ಎಂದು ಎಂದು ತಿಳಿಸಿದರು.

ಆಮ್ಲಜನಕ ಕೊರತೆ ನೀಗಿಸುವ ಸಲುವಾಗಿ ಕೇಂದ್ರ ಸರ್ಕಾರ ₹ 84 ಲಕ್ಷ ವೆಚ್ಚದ 10 ಕೆ.ಎಲ್. ಆಮ್ಲಜನಕ ಘಟಕ ಮಂಜೂರು ಮಾಡಿದ್ದು, ಈಗಾಗಲೇ ಕಂಪನಿಯೊಂದಿಗೆ ಸಮನ್ವಯ ಸಾಧಿಸಿದ್ದು, 20 ದಿನಗಳೊಳಗೆ ಕಾರ್ಯಾರಂಭವಾಗಲಿದೆ. ಇದಲ್ಲದೇ ನನ್ನ ತಂದೆ-ತಾಯಿಯವರ ಹೆಸರಿನಲ್ಲಿರುವ ಟ್ರಸ್ಟ್ ವತಿಯಿಂದಲೂ ದಾವಣಗೆರೆ ಹಾಗೂ ಜಗಳೂರಿನಲ್ಲಿ ಆಮ್ಲಜನಕ ಘಟಕ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಸೌರ್ಹಾದ ಬ್ಯಾಂಕ್ ಹಾಗೂ ಯೂನಿಯನ್ ಬ್ಯಾಂಕ್‍ಗಳೊಂದಿಗೆ ಸಭೆ ನಡೆಸಿ ಅವರಿಂದ ಆಮ್ಲಜನಕ ಮಷಿನ್ ಖರೀದಿಸಲು ಚರ್ಚೆ ನಡೆಸುತ್ತೇವೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಶಾಸಕ ಎಸ್.ಎ. ರವೀಂದ್ರನಾಥ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಮೇಯರ್‌ ಎಸ್.ಟಿ. ವೀರೇಶ್, ಆಯುಕ್ತ ವಿಶ್ವನಾಥ ಮುದಜ್ಜಿ, ಡಿಎಚ್‍ಒ ಡಾ. ನಾಗರಾಜ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ್ ಬಾರ್ಕಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ನಟರಾಜ್ ಅವರೂ ಇದ್ದರು.


Spread the love

About Laxminews 24x7

Check Also

ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Spread the love ಸೋಷಿಯಲ್‌ ಮೀಡಿಯಾ ಕುರಿತು ಹಲವು ನಟ-ನಟಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಮಾತುಗಳನ್ನು ತಿರುಚುವ, ಥಂಬ್‌ನೈಲ್‌ ಮೂಲಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ