Breaking News
ಸಾಂದರ್ಭಿಕ ಚಿತ್ರ

ಅಂತ್ಯಕ್ರಿಯೆಗೆ ಕೆಲವೇ ನಿಮಿಷವಿರುವಾಗ ಎದ್ದು ನಿಂತ ಕೋವಿಡ್ ಪೀಡಿತ ಮಹಿಳೆ

Spread the love

ಹೊಸದಿಲ್ಲಿ: ಒಂದು ವಿಲಕ್ಷಣ ಘಟನೆಯೊಂದರಲ್ಲಿ ಬಾರಾಮತಿಯ ಮುಧಲೆ ಗ್ರಾಮದ, 76 ವರ್ಷದ ಮಹಿಳೆ ಕೋವಿಡ್ ನಿಂದ ಮೃತಪಟ್ಟಿದ್ದಾಳೆಂದು ನಂಬಿ ಕುಟುಂಬದವರು ಅಂತ್ಯಕ್ರಿಯೆಗೆ ತಯಾರಿ ನಡೆಸುತ್ತಿದ್ದಾಗ ಮಹಿಳೆ ಎದ್ದುನಿಂತಿರುವ ಒಂದು ವಿಲಕ್ಷಣ ಘಟನೆಯೊಂದು ವರದಿಯಾಗಿದೆ.

ಮಹಿಳೆಯನ್ನು ಶಕುಂತಲಾ ಗಾಯಕ್ವಾಡ್ ಎಂದು ಗುರುತಿಸಲಾಗಿದೆ. ಮಹಿಳೆ ಕೆಲವು ದಿನಗಳ ಹಿಂದೆ ಕೋವಿಡ್ -19 ಸೋಂಕಿಗೆ ತುತ್ತಾಗಿದ್ದರು. ಮನೆಯಲ್ಲಿ ಪ್ರತ್ಯೇಕವಾಗಿದ್ದರು. ಆದರೆ ವೃದ್ಧಾಪ್ಯದಿಂದಾಗಿ ಆಕೆಯ ಸ್ಥಿತಿ ಹದಗೆಟ್ಟಿತು, ಹೀಗಾಗಿ ಕುಟುಂಬದವರು ಮಹಿಳೆಯನ್ನು ಬಾರಾಮತಿಯ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಿದರು.

ಮೇ 10 ರಂದು ವೃದ್ಧ ಮಹಿಳೆಯನ್ನು ಖಾಸಗಿ ವಾಹನದಲ್ಲಿ ಬಾರಾಮತಿಗೆ ಕರೆದೊಯ್ಯಲಾಯಿತು. ಕುಟುಂಬವು ಬಾರಾಮತಿಯಲ್ಲಿ ಆಸ್ಪತ್ರೆಯ ಹಾಸಿಗೆಯನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಅವರು ಕಾರಿನಲ್ಲಿ ಕಾಯುತ್ತಿದ್ದಾಗ ಮಹಿಳೆ ಪ್ರಜ್ಞೆ ತಪ್ಪಿ ಬಿದ್ದು, ದೇಹದ ಚಲನೆಯೂ ನಿಂತುಹೋಗಿತ್ತು.

ಮಹಿಳೆ ಮೃತಪಟ್ಟಿದ್ದಾಳೆ ಎಂದು ಭಾವಿಸಿದ ಕುಟುಂಬದವರು ತಮ್ಮ ಸಂಬಂಧಿಕರಿಗೆ ಅಂತಿಮ ವಿಧಿಗಳ ಬಗ್ಗೆ ಮಾಹಿತಿ ನೀಡಿದರು.

ಕುಟುಂಬವು ವೃದ್ದೆಯನ್ನು ಮನೆಗೆ ಕರೆದುಕೊಂಡು ಹೋಗಿ ಶವ ಸಂಸ್ಕಾರಕ್ಕೆ ಸಿದ್ಧತೆ ಆರಂಭಿಸಿತು. ಸಾವಿಗೆ ಸಂಬಂಧಿಕರು ಶೋಕಿಸುತ್ತಿದ್ದಂತೆ, ಮಹಿಳೆ ಎದ್ದು ಕುಳಿತಾಗ ಎಲ್ಲರಿಗೂ ಅಚ್ಚರಿಯಾಗಿತ್ತು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ