Breaking News

ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಏರಿಕೆ

Spread the love

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಪೆಟ್ರೋಲ್-ಡೀಸೆಲ್ ದರ ಕೂಡ ಏರಿಕೆಯಾಗುತ್ತಿದ್ದು, ಇಂದು ಪ್ರತಿ ಲೀಟರ್ ಪೆಟ್ರೋಲ್ 22-24 ಪೈಸೆ ಹಾಗೂ ಡೀಸೆಲ್ 27-29 ಪೈಸೆ ಏರಿಕೆಯಾಗಿದೆ.

ರಾಜಧಾನಿ ಬೇಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 95.33 ರೂಪಾಯಿ ಹಾಗೂ ಡೀಸೆಲ್ ದರ 87.92 ರೂಪಾಯಿ ಹೆಚ್ಚಳವಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 92.58ರೂ ಹಾಗೂ ಡೀಸೆಲ್ ದರ 83.22 ರೂಪಾಯಿ ಆಗಿದೆ.

ಮುಂಬೈನಲ್ಲಿ ಪೆಟ್ರೋಲ್-ಡೀಸೆಲ್ ದರ ಸಾರ್ವಕಾಲಿಕ ಗರಿಷ್ಠ ಏರಿಕೆ ಕಂಡಿದ್ದು, ಒಂದು ಲೀಟರ್ ಪೆಟ್ರೋಲ್ ದರ 98.88 ರೂಪಾಯಿ ಹಾಗೂ ಡೀಸೆಲ್ ದರ 90.40 ರೂ ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 92.67 ರೂ ಇದ್ದರೆ ಡೀಸೆಲ್ ದರ 86.06 ರೂ ಏರಿಕೆ ಕಂಡಿದೆ.


Spread the love

About Laxminews 24x7

Check Also

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Spread the loveಬೆಂಗಳೂರು: ಡಿ.ಕೆ.ಶಿವಕುಮಾರ್  ಕೆಪಿಸಿಸಿ ಅಧ್ಯಕ್ಷರಾಗಿ ಇಂದಿಗೆ 6 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಪಕ್ಷದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ