Breaking News
Home / ರಾಜಕೀಯ / ಗಾಜಾ ನಗರದ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ

ಗಾಜಾ ನಗರದ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ

Spread the love

ಗಾಜಾ ನಗರ: ಗಾಜಾ ನಗರದ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ ಮುಂದುವರಿಸಿದೆ. ಭಾನುವಾರ ಬೆಳಿಗ್ಗೆ ಇಸ್ರೇಲ್‌ನ ಯುದ್ಧವಿಮಾನಗಳು ನಡೆಸಿದ ದಾಳಿಯಲ್ಲಿ ಹಲವಾರು ಕಟ್ಟಡಗಳು ನೆಲಸಮಗೊಂಡಿದ್ದು, ರಸ್ತೆಗಳು ಹಾಳಾಗಿವೆ.
ಎರಡು ಗಂಟೆಗಳಿಗೂ ಹೆಚ್ಚು ಅವಧಿಗೆ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮಕ್ಕಳು ಹಾಗೂ ಮಹಿಳೆಯರು ಸೇರಿ 25 ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

 

ಕಟ್ಟಡಗಳ ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯ ಮುಂದುವರಿದಿದೆ. ಕಟ್ಟಡಗಳು, ರಸ್ತೆಗಳು ಹಾನಿಯಾಗಿರುವ ಚಿತ್ರಗಳನ್ನು ಗಾಜಾ ನಿವಾಸಿಗಳು, ಪತ್ರಕರ್ತರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ವೈಮಾನಿಕ ದಾಳಿಯಿಂದಾಗಿ ನಗರದ ಮುಖ್ಯರಸ್ತೆಯಲ್ಲಿ ಕಂದಕ ಸೃಷ್ಟಿಯಾಗಿ, ನಗರದ ಬೃಹತ್‌ ಆಸ್ಪತ್ರೆಯಾಗಿರುವ ಶಿಫಾಕ್ಕೆ ಸಂಪರ್ಕ ಕಡಿದು ಹೋಗಿದೆ. ಅಗತ್ಯ ಇರುವವರೆಗೂ ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ನ ದಾಳಿ ಮುಂದುವರೆಯಲಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಈ ವಿಚಾರವಾಗಿ ಶನಿವಾರ ಮಾತನಾಡಿರುವ ಅವರು, ‘ಗಾಜಾ ಪಟ್ಟಿಯಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಹಮಸ್‌ನ ಬಂಡುಕೋರ ನಾಯಕರು ಕಾರಣವಾಗಿದ್ದಾರೆ. ರಾಕೆಟ್‌ ದಾಳಿಯಲ್ಲಿ ನಾಗರಿಕರ ಸಾವುನೋವುಗಳನ್ನು ತಪ್ಪಿಸಲು ನನ್ನ ಕೈಲಾದಷ್ಟು ಪ್ರಯತ್ನ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.

‘ಪ್ರಸ್ತುತ ಏರ್ಪಟ್ಟಿರುವ ಸಂಘರ್ಷಕ್ಕೆ ನಾವು ಹೊಣೆಗಾರರಲ್ಲ. ಈ ಬಗ್ಗೆ ನಮಗೆ ಯಾವುದೇ ಅಪರಾಧಿ ಭಾವನೆಯೂ ಇಲ್ಲ. ನಮ್ಮ ಮೇಲೆ ಆಕ್ರಮಣ ಮಾಡಿದವರಿಗೆ ಅಪರಾಧಿ ಭಾವನೆ ಇರಬೇಕು’ ನೆತನ್ಯಾಹು ಹೇಳಿದ್ದಾರೆ.’ನಾವು ಇನ್ನೂ ಈ ಕಾರ್ಯಾಚರಣೆಯ ಮಧ್ಯದಲ್ಲಿದ್ದೇವೆ. ಅದು ಇನ್ನೂ ಮುಕ್ತಾಯವಾಗಿಲ್ಲ. ಅಗತ್ಯ ಇರುವವರೆಗೂ ಕಾರ್ಯಾಚರಣೆಯನ್ನು ನಡೆಸಲಿದ್ದೇವೆ’ ಎಂದು ಇಸ್ರೇಲ್‌ ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.

‘ನಾವು ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದೇವೆ. ಹಮಸ್‌ ಬಂಡುಕೋರರು ನಾಗರಿಕರ ಹಿಂದೆ ಅಡಗಿ ನಾಗರಿಕರ ಮೇಲೆಯೇ ದಾಳಿ ನಡೆಸುತ್ತಿದ್ದಾರೆ. ನಾವು ನಾಗರಿಕರ ಪ್ರಾಣ ಹಾನಿ ಆಗದಂತೆ ಎಚ್ಚರ ವಹಿಸಿದ್ದೇವೆ.’ ನೆತನ್ಯಾಹು ತಿಳಿಸಿದ್ದಾರೆ.

ಜೆರುಸಲೇಂನ ಅಲ್-ಅಕ್ಸಾ ಮಸೀದಿಯು ವಿವಾದದ ಕೇಂದ್ರ ಬಿಂದುವಾಗಿದ್ದು, ಮುಸ್ಲಿಂ ಹಾಗೂ ಯಹೂದಿಗಳ ಪವಿತ್ರವಾದ ಸ್ಥಳವಾಗಿದೆ. ಇಲ್ಲಿ ಉಂಟಾದ ಸಂಘರ್ಷವನ್ನು ತಡೆಯಲು ಪೊಲೀಸಲು ಅಶ್ರುವಾಯು ಹಾಗೂ ಗ್ರೆನೇಡ್ ಪ್ರಯೋಗಿಸಿದ್ದರು. ಇದು ಈಗ ಗಾಜಾ ಪಟ್ಟಿಯಲ್ಲಿ ಭಾರಿ ಸಂಘರ್ಷಕ್ಕೆ ತಿರುಗಿದೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ