Breaking News

ಕೊರೋನಾ ತಡೆಗೆ ಮತ್ತೊಂದು ಕ್ರಮ: 17 ಜಿಲ್ಲೆಗಳ ಡಿಸಿಗಳೊಂದಿಗೆ ಪ್ರಧಾನಿ ಮೋದಿ, ಸಿಎಂ BSY ಸಂವಾದ

Spread the love

ಕೋವಿಡ್-19 ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೇ 18 ರಂದು ಬೆಳಗ್ಗೆ 11 ಕ್ಕೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಕೊಡಗು, ಬೆಂಗಳೂರು ನಗರ, ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ರಾಯಚೂರು, ಕಲಬುರಗಿ, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ವಿಡಿಯೋ ಸಂವಾದದ ಮೂಲಕ ಜಿಲ್ಲೆಯ ಕೋವಿಡ್ ಸ್ಥಿತಿಗತಿ, ಕೈಗೊಂಡಿರುವ ಕ್ರಮಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಆದ್ದರಿಂದ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು/ಕಾರ್ಯದರ್ಶಿಗಳು ಹಾಗೂ ಕೋವಿಡ್ ಕಾರ್ಯನಿರ್ವಹಣೆಯ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸುವಂತೆ ತಿಳಿಸಲಾಗಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ