ಬೆಂಗಳೂರು : ಕೊರೋನಾ 2ನೇ ಅಲೆಯು ಯುವಕರ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಆನಂಕ್ರ ಕೊರೋನಾ 3ನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯದ ಪ್ರತಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಪೀಡಿಯಾಟ್ರಿಕ್ಸ್ ವಿಭಾಗದಲ್ಲಿ ಸೋಂಕಿತ ಮಕ್ಕಳಿಗಾಗಿ ಹಾಸಿಗೆ ಕಾಯ್ದಿರಿಸುವಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಗೆ ಪತ್ರ ಬರೆದಿರುವಂತ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹರುಡುತ್ತಿದ್ದು, 3ನೇ ಅಲೆಯೂ ಮುಂಬರುವ ದಿನಗಳಲ್ಲಿ ಹರಡುವ ಸಂಭವವಿರುತ್ತದೆ ಎಂದು ತಜ್ಞ ವೈದ್ಯರು ಅಭಿಪ್ರಾಯಿಸಿರುತ್ತಾರೆ. ಹೀಗಾಗಿ ಸರ್ಕಾರ ಕೂಡ ಕೊರೋನಾ ಸೋಂಕನ್ನು ತಡೆಯಲು ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಾ ಬಂದಿದೆ.
ಪ್ರಸ್ತುತ ಮಕ್ಕಳನ್ನು ಕೊರೋನಾ ಸೋಂಕಿನಿಂದ ದೂರವಿಡಲು ಬಹಳ ಜಾಗೃತಿ ವಹಿಸಬೇಕಾದ ಅಗತ್ಯತೆ ಇರುವುದರಿಂದ ಪ್ರತಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಆಸ್ಪತ್ರೆಗಳ ಪೀಡಿಯಾಟ್ರಿಕ್ಸ್(Pediatrics) ವಿಭಾಗದಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗಾಗಿಯೇ ಹಾಸಿಗೆಗಳನ್ನು(ಬೆಡ್) ಕಾಯ್ದಿರಿಸುವಂತೆ ಹಾಗೂ ಇದಕ್ಕೆ ಸಂಬಂಧಪಟ್ಟ ಇತರೇ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಕ್ತ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ.
Laxmi News 24×7