Breaking News

ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಒಂದು ವಾರ ಲಾಕ್‌ಡೌನ್‌ ವಿಸ್ತರಣೆ ; ಅರವಿಂದ್‌ ಕೇಜ್ರೀವಾಲ್‌

Spread the love

ನವದೆಹಲಿ: “ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್‌ಡೌನ್‌ ವಿಸ್ತರಿಸಲಾಗಿದ್ದು, ಮೇ 24ರವರೆಗೆ ಲಾಕ್‌ಡೌನ್‌‌ ಅನ್ನು ವಿಸ್ತರಿಸಲು ನಿರ್ಧರಿಸಲಾಗಿದೆ” ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ. ಈ ಕುರಿತು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌‌ ಮಾಹಿತಿ ನೀಡಿದ್ದು, “ಲಾಕ್‌ಡೌನ್‌ ಪರಿಣಾಮ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ.

ಇಷ್ಟು ದಿನಗಳ ಕಾಲ ನಾವು ಪಟ್ಟ ಪರಿಶ್ರಮವನ್ನು ನಾವು ನಷ್ಟವಾಗಲು ಬಿಡುವುದಿಲ್ಲ. ಹಾಗಾಗಿ ಇನ್ನೂ ಒಂದು ವಾರ ಲಾಕ್‌ಡೌನ್‌ ಅನ್ನು ವಿಸ್ತರಿಸಲಾಗುತ್ತಿದೆ. ಮುಂದಿನ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಲಾಕ್‌ಡೌನ್‌ ಜಾರಿಯಲ್ಲಿರಲಿದೆ” ಎಂದು ತಿಳಿಸಿದ್ದಾರೆ. ದೆಹಲಿಯಲ್ಲಿ ಶುಕ್ರವಾರ 8,506 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ದೆಹಲಿಯಲ್ಲಿ ಒಂದು ತಿಂಗಳ ಬಳಿಕ 10,000ಕ್ಕಿಂತಲೂ ಕಡಿಮೆ ಕೊರೊನಾ ಪ್ರಕರಣಗಳು ವರದಿಯಾಗಿವೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ