ಬೆಂಗಳೂರು: ‘ತೌಕ್ತೆ’ ಚಂಡಮಾರುತ ಪರಿಣಾಮ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮೇ 21 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 21 ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 90 ಕಿಲೋಮೀಟರ್ ವೇಗದ ಗಾಳಿ ಬೀಸುತ್ತಿದ್ದು, 6.3 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 19 ರಿಂದ 21 ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನ ಧಾರವಾಡ, ವಿಜಯಪುರ, ಹಾವೇರಿ, ಬೆಳಗಾವಿ, ಬಾಗಲಕೋಟೆ ಭಾಗದಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Laxmi News 24×7