Breaking News

ವರ್ಷದ ರಜೆಗೆ ಬಂದಿದ್ದ ಸೈನಿಕ ತೋಟದ ಮನೆಯಲ್ಲಿ ಕ್ವಾರಂಟೈನ್

Spread the love

ಹಾವೇರಿ: ರಾಜ್ಯದಲ್ಲಿ ಕೊರೊನಾ ಅರ್ಭಟ ಮುಂದುವರಿದಿದೆ. ವರ್ಷದ ರಜೆಗೆ ಬಂದಿದ್ದ ಸೈನಿಕ ಮನೆಗೆ ಹೋಗದೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದ ತೋಟದ ಮನೆಯಲ್ಲಿ ಸ್ವಯಂ ಕ್ವಾರಂಟೈನ್ ಆಗಿದ್ದಾರೆ.

ಗ್ರಾಮದ ಹೊರವಲಯದಲ್ಲಿ ಇರುವ ಶಶಿಧರ ಎಲಿಗಾರ ಎಂಬುವರ ತೋಟದ ಮನೆಯಲ್ಲಿ ಸೈನಿಕ ಮಾಲತೇಶ ಕ್ವಾರಂಟೈನ್ ಆಗಿದ್ದಾರೆ. ನವದೆಹಲಿಯಲ್ಲಿ ಸೈನಿಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಾಲತೇಶ ತಿಪ್ಪಕ್ಕನವರ ಮನೆಗೆ ತೆರಳದೆ ನೇರವಾಗಿ ತೋಟದ ಮನೆಯಲ್ಲಿ ಹೋಂ ಕ್ವಾರಂಟೈನ್ ಆಗಿ ಸೈನಿಕ ಮಾಲತೇಶ ಇತರರಿಗೆ ಮಾದರಿಯಾಗಿದ್ದಾರೆ

ಕಳೆದ ಎಂಟು ದಿನಗಳಿಂದ ತೋಟದ ಮನೆಯಲ್ಲಿ ಕ್ವಾರಂಟೈನ್ ಆಗಿದ್ದು, ತಾವೇ ಅಡುಗೆ ಮಾಡಿಕೊಂಡು ಊಟ ಮಾಡುತ್ತಿದ್ದಾರೆ. ಮನೆಯ ಸದಸ್ಯರು ಹಾಗೂ ಗ್ರಾಮಸ್ಥರಿಂದ ದೂರವಿದ್ದು ಕ್ವಾರಂಟೈನ್ ಅವಧಿ ಮುಗಿಸುತ್ತಿದ್ದಾರೆ. ಎಲ್ಲರೂ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡಿ ಕೊರೊನಾ ದಿಂದ ನಾವು ದೂರ ಇರೋಣ ಎನ್ನುವ ಸಂದೇಶವನ್ನ ಸೈನಿಕ ಮಾಲತೇಶ ನೀಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ