Breaking News

ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ : ಓರ್ವ ಸವಾರನಿಗೆ ಗಂಭೀರ ಗಾಯ

Spread the love

ಶಿವಮೊಗ್ಗ : ಚಲಿಸುತ್ತಿದ್ದ ಬೈಕ್ ಗಳ‌ ಮೇಲೆ ಮರ ಉರುಳಿ ಬಿದ್ದು, ಓರ್ವ ಸವಾರ ಗಂಭೀರ ಗಾಯಗೊಂಡು, ಮತ್ತೋರ್ವನಿಗೆ ಸಣ್ಣ-ಪುಟ್ಟ ಗಾಯಗಳಾಗಿರುವ ಘಟನೆ ಹೊಸನಗರದ ಕೊಡಚಾದ್ರಿ ಕಾಲೇಜು ಎದುರು ಸೋಮವಾರ ( ಮೇ.17) ನಡೆದಿದೆ.

ಭಾರಿ ಗಾಳಿ-ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರ ರಸ್ತೆಯಲ್ಲಿ ಉರುಳಿ ಬಿದ್ದಿದೆ. ಪರಿಣಾಮ ಮಾವಿನಕೊಪ್ಪ ಬಡಾವಣೆಯ ಸಾಧಿಕ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಈತ ಬೈಕ್ ನಲ್ಲಿ ತೆರಳುವಾಗ ಮರ ಬಿದ್ದಿದೆ. ಚಿಕಿತ್ಸೆಗಾಗಿ ಈತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೋರ್ವ ಬೈಕ್ ಸವಾರ ಪ್ರತೀಕ್ ಹಾಗೂ ನಡೆದುಕೊಂಡು ಹೋಗುತ್ತಿದ್ದ ಋತ್ವಿಕ್ ಎಂಬುವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ರಸ್ತೆಗೆ ಅಡ್ಡಲಾಗಿ‌ ಮರ ಬಿದ್ದಿದ್ದರಿಂದ ಹೊಸನಗರ ಹಾಗೂ ಶಿವಮೊಗ್ಗ ನಡುವಿನ ಸಂಪರ್ಕ‌ ಕೆಲಕಾಲ ಸ್ಥಗಿತಗೊಂಡಿತ್ತು. ಬಳಿಕ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ