Breaking News

ಕೊರೊನಾ ಹೋರಾಟಕ್ಕೆ ಸೂಪರ್ ಸ್ಟಾರ್ ರಜನಿ ನೆರವು; ₹50 ಲಕ್ಷ ದೇಣಿಗೆ

Spread the love

ಚೆನ್ನೈ: ನಟ ರಜನಿಕಾಂತ್ ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿ, ಕೊರೊನಾವೈರಸ್ ವಿರುದ್ಧದ ಹೋರಾಟಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹50 ಲಕ್ಷ ದೇಣಿಗೆಯನ್ನು ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ. ಇತ್ತೀಚೆಗಷ್ಟೇ ರಜನಿ ಕೊರೊನಾ ಲಸಿಕೆಯ 2ನೇ ಡೋಸ್‌ ಹಾಕಿಸಿಕೊಂಡಿದ್ದರು.

ಕೊರೊನಾ ನಿರ್ಮೂಲನೆಗಾಗಿ ನಾನು ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹50 ಲಕ್ಷ ದೇಣಿಗೆಯನ್ನು ನೀಡಿದ್ದೇನೆ. ಕೋವಿಡ್ ಬಿಕ್ಕಟ್ಟಿನಿಂದ ಹೊರಬರಲು ಸರ್ಕಾರವು ನಿರ್ದೇಶಿಸುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕು ಎಂದು ರಜನಿಕಾಂತ್ ಕರೆ ನೀಡಿದ್ದಾರೆ.

ಈ ಮೊದಲು ಕೊರೊನಾವೈರಸ್ ವಿರುದ್ಧ ಹೋರಾಡಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯನ್ನು ನೀಡುವಂತೆ ಸ್ಟಾಲಿನ್ ಅವರು ಜನರಿಗೆ ಮನವಿ ಮಾಡಿದ್ದರು.

ಭಾನುವಾರದಂದು ಕೋವಿಡ್ ವಿರುದ್ಧ ಹೋರಾಡಲು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ 13 ಸದಸ್ಯರ ಶಾಸಕಾಂಗ ಸಲಹಾ ಸಮಿತಿಯನ್ನು ರಚಿಸಲಾಗಿತ್ತು.

 

ತಮಿಳುನಾಡಿನಲ್ಲಿ ಭಾನುವಾರದಂದು ಹೊಸದಾಗಿ 12,450 ಸೋಂಕು ಪ್ರಕರಣಗಳು ವರದಿಯಾಗಿದ್ದು, 20,905 ಮಂದಿ ಚೇತರಿಸಿಕೊಂಡಿದ್ದಾರೆ. ಇದೇ ಅವಧಿಯಲ್ಲಿ 303 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿವೆ.

ತಮಿಳುನಾಡಿನಲ್ಲಿ ಈಗ 2,07,789 ಸಕ್ರಿಯ ಪ್ರಕರಣಗಳಿದ್ದು, 17,359 ಮಂದಿ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ