Breaking News

ಗೋಕಾಕದಲ್ಲಿ ಭೀಕರ ಸರಣಿ ಅಪಘಾತ: ಮೂವರಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

Spread the love

ಗೋಕಾಕ: ನಗರದ ಬ್ಯಾಳಿಕಾಟಾ ಬಳಿ ಸೋಮವಾರ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿ, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ನಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ನಗರದ ಕಡೆ ಆಗಮಿಸುತ್ತಿದ್ದ ಇಂಡಿಕಾ ಕಾರ್, ಇಲ್ಲಿನ ನಾಕಾ 1 ರಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಆಟೊ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಇದರಿಂದ ಆಟೋದ ಹಿಂಬದಿ ಇದ್ದ ಬೈಕ್ ಗೂ ಆಟೋ ಡಿಕ್ಕಿಯಾಗಿ ಸರಣಿ ಅಪಘಾತವಾಗಿದೆ.

ಅಪಘಾತದ ಭೀಕರತೆಗೆ ಕಾರ್, ಆಟೋ, ಬೈಕ್ ಮೂರು ವಾಹನಗಳ ಚಾಲಕರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಇವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಿಂದ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರ್ ಹಾಗೂ ಬೈಕ್ ಕೂಡ ಜಖಂಗೊಂಡಿವೆ.

ಸದ್ಯ ಗಾಯಾಳುಗಳು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576*
*Laxmi News*

 


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ