Breaking News
Gold ornaments on Indian currency

ಚಿನ್ನ ಗಿರವಿ ಇಟ್ಟು ಸಾಲ ಪಡೆದವರಿಗೆ ಗುಡ್ ನ್ಯೂಸ್ : ಚಿನ್ನದ ಸಾಲದ ಮೇಲಿನ ಬಡ್ಡಿ ಮನ್ನಾ!

Spread the love

ಬೆಂಗಳೂರು : ಚಿನ್ನ ಗಿರವಿ ಇಟ್ಟು ಸಾಲ ಪಡೆದ ಗ್ರಾಹಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಚಿನ್ನದ ಸಾಲದ ಮೇಲಿನ 2-3 ತಿಂಗಳ ಬಡ್ಡಿ ಮನ್ನಾ ಮಾಡುವ ಬಗ್ಗೆ ರಾಜ್ಯ ಆಭರಣ ವರ್ತಕರ ಒಕ್ಕೂಟ ಚಿಂತಿಸಿದೆ.

 

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡ್ಡಿ ಮನ್ನಾ ಮಾಡುವ ಚಿಂತನೆಯಿದ್ದು, ಈ ಬಗ್ಗೆ ಸದ್ಯದಲ್ಲೇ ವರ್ತಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ರಾಜ್ಯ ಆಭರಣ ವರ್ತಕರ ಸಂಘ ತಿಳಿಸಿದೆ.

 

ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ವಿವಿಧ ಕಾರಣಕ್ಕಾಗಿ ಚಿನ್ನಾಭರಣಗಳ ಅಂಗಡಿಗಳಲ್ಲಿ ಚಿನ್ನದ ಮೇಲೆ ಸಾಲ ಪಡೆದುಕೊಂಡಿದ್ದಾರೆ. ಆರ್ ಬಿಐ ನಿಯಮದಂತೆ 1 ಗ್ರಾಂ ಚಿನ್ನಕ್ಕೆ ಶೇ. 75 ಸಾಲ ನೀಡಲಾಗುತ್ತದೆ. ವರ್ಷಕ್ಕೆ ಶೇ. 8.5 ನಿಂದ ಶೇ. 14 ರವರೆಗೆ ಬಡ್ಡಿ ವಿಧಿಸಲಾಗುತ್ತದೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ