Breaking News
Home / ರಾಷ್ಟ್ರೀಯ / ಕೋ-ವಿನ್ ಮುಂದಿನ ವಾರದಲ್ಲಿ ಹಿಂದಿ ಸೇರಿ 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ : ಕೇಂದ್ರ

ಕೋ-ವಿನ್ ಮುಂದಿನ ವಾರದಲ್ಲಿ ಹಿಂದಿ ಸೇರಿ 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ : ಕೇಂದ್ರ

Spread the love

ನವ ದೆಹಲಿ : ಕೋ-ವಿನ್ ಪೋರ್ಟಲ್ ಮುಂದಿನ ವಾರದಲ್ಲಿ ಹಿಂದಿ ಮತ್ತು 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರ ಅಧ್ಯಕ್ಷತೆಯಲ್ಲಿ ಇಂದು(ಸೋಮವಾರ, ಮೇ 17) ನಡೆದ ಕೋವಿಡ್ ಸೋಂಕಿನ ಕುರಿತು ಉನ್ನತ ಮಟ್ಟದ ಮಂತ್ರಿಗಳ 26 ನೇ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಈ ಸಂದರ್ಭ ಮಾತನಾಡಿದ ಹರ್ಷವರ್ಧನ್, ಕೋವಿಡ್ ರೂಪಾಂತರಗಳ ಬಗ್ಗೆ ಅಧ್ಯಯನ ಮಾಡಲು ಇನ್ನೂ 17 ಪ್ರಯೋಗಾಲಯಗಳನ್ನು ಐ ಎನ್ ಎಸ್ ಎ ಸಿ ಒ ಗ ನೆಟ್ ವರ್ಕ್ ಗಳಿಗೆ ಸೇರಿಸಲಾಗುತ್ತದೆ ಎಂದು ತಿಳಿಸಿದರು.

ಇನ್ನು, ಕೋವಿನ್ ಬಗ್ಗೆ ತಿಳಿಸಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ, ಮುಂದಿನ ವಾರದೊಳಗೆ ಕೋವಿನ್ ಪ್ಲಾಟ್‌ಫಾರ್ಮ್ ಹಿಂದಿ ಮತ್ತು 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುತ್ತಿದೆ ಎಂದು ಸಭೆಯಲ್ಲಿ ಹೇಳಿದ್ದಾರೆ.

ಎನ್‌ ಸಿ ಡಿ ಸಿ ನಿರ್ದೇಶಕ ಡಾ. ಸುಜೀತ್ ಕೆ ಸಿಂಗ್ ಅವರು ಭಾರತದಲ್ಲಿ ವರದಿಯಾಗುತ್ತಿರುವ SARS-CoV-2 ಮತ್ತು ಕೋವಿಡ್ ರೂಪಾಂತರಗಳ ಬಗ್ಗೆ ವಿವರವಾದ ವರದಿಯನ್ನು ಮಂಡಿಸಿದರು.

ಬಿ.1.1.7 ಮತ್ತು ಬಿ .1.617 ನಂತಹ ರೂಪಾಂತರಗಳ ಹರಡುವಿಕೆಗೆ ಸಂಬಂಧಿಸಿದ ಅಂಕಿಅಂಶಗಳನ್ನು ಅವರು ತೋರಿಸಿದರು. ಫೆಬ್ರವರಿ ಮತ್ತು ಮಾರ್ಚ್ ನಡುವೆ ಪಂಜಾಬ್ ಮತ್ತು ಚಂಡೀಗಡದಲ್ಲಿ ಸಂಗ್ರಹಿಸಲಾದ ಮಾದರಿಗಳಲ್ಲಿ ಬಿ 1.1.7 ರೂಪಾಂತರಿ (ಯುಕೆ ರೂಪಾಂತರ) ಪ್ರಧಾನವಾಗಿ ಕಂಡುಬಂದಿದೆ ಎಂದು ಅವರು ವರದಿಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸು: ಇಂದು ಹಾಸನದಲ್ಲಿ SIT ಸ್ಥಳ ಮಹಜರು, ಮೇ.4ಕ್ಕೆ ರೇವಣ್ಣ ವಿಚಾರಣೆ

Spread the loveಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಹಗರಣ ಕೇಸಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಎಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ