ಮಳವಳ್ಳಿ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಇಬ್ಬರು ಸ್ನೇಹಿತರ ಮೇಲೆ ಚೂರಿಯಿಂದ ದಾಳಿ ನಡೆಸಿ ಇರಿದು ಪರಾರಿಯಾಗಿರುವ ಘಟನೆ ಪಟ್ಟಣದ ಗಂಗಾಮತ ಬೀದಿಯಲ್ಲಿ ನಡೆದಿದೆ.
ಚೂರಿಯಿಂದ ಇರಿತಕ್ಕೊಳಗಾದ ಭರತ್ (೨೦) ಹಾಗೂ ಲೋಹಿತ್ (೨೦) ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಇಬ್ಬರ ಸ್ನೇಹಿತನಾದ ಮಧು ಅಲಿಯಾಸ್ ಮಾದಿ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾದ ಯುವಕ.
ಭಾನುವಾರ ರಾತ್ರಿ ೮ ಗಂಟೆ ಸಮಯದಲ್ಲಿ ಭರತ್ ಗಂಗಾಮತ ಬೀದಿಯಲ್ಲಿದ್ದ ಸಮಯದಲ್ಲಿ ದಿಢೀರ್ ಪ್ರತ್ಯಕ್ಷನಾದ ಮಧು ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಸಹಾಯಕ್ಕೆ ಧಾವಿಸಿದ ಲೋಹಿತ್‌ನ ಮೇಲೂ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಲೋಹಿತ್‌ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಮಳವಳ್ಳಿ ಸರ್ಕಾರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಭಾರತೀನಗರದ ಜಿ.ಮಾದೇಗೌಡ ಆಸ್ಪತ್ರೆಗೆ ರವಾನಿಸಲಾಯಿತು.
ಭರತ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಪತ್ತೆಯಾಗಿರುವ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.
Laxmi News 24×7