Breaking News
Home / ಜಿಲ್ಲೆ / ಬೆಂಗಳೂರು / 88ನೇ ವಸಂತಕ್ಕೆ ಕಾಲಿಟ್ಟ ಎಚ್‌.ಡಿ.ದೇವೇಗೌಡ: ಮೋದಿ ಸೇರಿ ಗಣ್ಯರಿಂದ ಶುಭಾಶಯ

88ನೇ ವಸಂತಕ್ಕೆ ಕಾಲಿಟ್ಟ ಎಚ್‌.ಡಿ.ದೇವೇಗೌಡ: ಮೋದಿ ಸೇರಿ ಗಣ್ಯರಿಂದ ಶುಭಾಶಯ

Spread the love

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್‌ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಂಗಳವಾರ 88ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಇಂದು ಬೆಳಿಗ್ಗೆ ದೂರವಾಣಿ ಕರೆ ಮಾಡಿ ಶುಭ ಹಾರೈಸಿದ್ದಾರೆ.

ಇತ್ತ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಸಂಸದ ಬಿ.ವೈ.ರಾಘವೇಂದ್ರ, ಪ್ರತಾಪ ಸಿಂಹ, ಸಂಸದೆ ಸುಮಲತಾ ಅಂಬರೀಶ್, ಸಚಿವರಾದ ಡಾ.ಕೆ.ಸುಧಾಕರ್, ಡಾ. ಸಿ.ಎನ್‌. ಅಶ್ವತ್ಥನಾರಾಯಣ, ಬಿ.ಸಿ.ಪಾಟೀಲ ಸೇರಿದಂತೆ ಹಲವು ಟ್ವಿಟರ್‌ನಲ್ಲಿ ಶುಭ ಕೋರಿದ್ದಾರೆ.

‘ನನಗೆ ಜನ್ಮ ದಿನಕ್ಕೆ ಶುಭ ಹಾರೈಸಲು ಇಂದು ಬೆಳಿಗ್ಗೆ ದೂರವಾಣಿ ಕರೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಷ್ಟ್ರವನ್ನು ಮುನ್ನಡೆಸುವ ಶಕ್ತಿಯನ್ನು ಅವರಿಗೆ ನೀಡುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ದೇವೇಗೌಡ ತಿಳಿಸಿದ್ದಾರೆ.

‘ಹಿರಿಯರು ಮತ್ತು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

‘ಮಾಜಿ ಪ್ರಧಾನಿ ಮತ್ತು ಜೆ‌ಡಿ‌ಎಸ್ ಪಕ್ಷದ ಹಿರಿಯ ನಾಯಕ ಎಚ್.ಡಿ.ದೇವೇಗೌಡರಿಗೆ‌ ಹುಟ್ಟು ಹಬ್ಬದ ಶುಭಾಶಯಗಳು. ಆಯುಷ್ಯ, ಆರೋಗ್ಯ ನಿಮ್ಮದಾಗಲಿ. ರಾಜ್ಯ ಮತ್ತು ದೇಶಕ್ಕೆ ನಿಮ್ಮ ಅನುಭವದ ಮಾರ್ಗದರ್ಶನ‌ ಸದಾ‌ ಸಿಗಲಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಶೂನ್ಯದಿಂದ ಮೇಲೆದ್ದು ಬರುವ, ಕನ್ನಡದ ನೆಲದಿಂದ ವಿಶಾಲ ರಾಷ್ಟ್ರ ಆಳುವ, ಕನ್ನಡ, ಕರ್ನಾಟಕಕ್ಕಾಗಿ ಬೆಟ್ಟದಂತೆ ನಿಲ್ಲುವ ಕರ್ನಾಟಕದ ವೀರ ಪರಂಪರೆಗೆ ಹೆಗ್ಗುರುತಾಗಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಅಪಾರ ಅನುಭವ ನಮಗೆ ಸದಾ ದಾರಿ ದೀಪ. ನಿಮ್ಮ ಅಚಲ ಆತ್ಮವಿಶ್ವಾಸ ನಮಗೆ ಪ್ರೇರಣದಾಯಕ’ ಎಂದು ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಅಂತಿಮವಾಯ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ!

Spread the loveಬೆಂಗಳೂರು, ಮಾರ್ಚ್ 12: ಲೋಕಸಭಾ ಚುನಾವಣೆಗೆ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು 28 ಲೋಕಸಭಾ ಕೇತ್ರಗಳನ್ನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ