Breaking News

ರೆಮ್ಡಿಸಿವರ್​ ಕಾಳಸಂತೆ: ಖಾಸಗಿ ಆಸ್ಪತ್ರೆ ಸ್ಟಾಫ್ ನರ್ಸ್​ ಅರೆಸ್ಟ್​

Spread the love

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ರೆಮ್ಡಿಸಿವರ್ ಮಾರಾಟ ಮಾಡುತ್ತಿದ್ದ ಮತ್ತೋರ್ವ ಆರೋಪಿಯನ್ನು ಬಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮನು (26) ಬಂಧಿತ ಆರೋಪಿ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್​ ನರ್ಸ್​ ಆಗಿ ಕೆಲಸ ಮಾಡ್ತಿದ್ದ ಆರೋಪಿ, ರೆಮ್ಡಿಸಿವರ್ ಒಂದು ಡೋಸ್​ಗೆ ₹25 ಸಾವಿರಕ್ಕೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಈ ಬಗ್ಗೆ ಪೊಲೀಸರು ಖಚಿತ ಮಾಹಿತಿ ಕಲೆ ಹಾಕಿದ್ದು, ಇಂದು ನಗರದ ಫೇಮಸ್​​ ಖಾಸಗಿ ಆಸ್ಪತ್ರೆ ಬಳಿ ಮಾರಾಟ ಮಾಡುತ್ತಿದ್ದ ವೇಳೆ ರೆಡ್​ಹ್ಯಾಂಡ್​ ಆಗಿ ಬಂಧಿಸಿದ್ದಾರೆ. ಅಲ್ಲದೇ ಆರೋಪಿಯಿಂದ ಒಟ್ಟು 13 ಔಷಧಿ ಬಾಟಲ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಯನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ