Breaking News

ಬೆಳಗಾವಿ ಜಿಲ್ಲೆಯಲ್ಲಿ 3 ದಿನ ಸಂಪೂರ್ಣ ಲಾಕ್ ಡೌನ್:ಜಿಲ್ಲಾಧಿಕಾರಿ

Spread the love

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ 3 ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳು ಇಂದು ಹೊಸ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 22, 23 ಹಾಗೂ 24ರಂದು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಆದೇಶ ಹೊರಡಿಸಲಾಗಿದೆ.

22ರ ಬೆಳಗ್ಗೆ 6 ಗಂಟೆಯಿಂದ 24ರ ಬೆಳಗ್ಗೆ 6 ಗಂಟೆಯವರೆಗೂ ಲಾಕ್ ಡೌನ್ ಇರಲಿದೆ. ಇದು ಈಗಾಗಲೆ ಜಾರಿಯಲ್ಲಿರುವ ಲಾಕ್ ಡೌನ್ ಗಿಂತಲೂ ಕಠಿಣವಾಗಿರಲಿದೆ.

ಈ ಅವಧಿಯಲ್ಲಿ ಆಸ್ಪತ್ರೆಗಳಿಗೆ ಸಂಚರಿಸಲು, ಹಾಲು, ಔಷಧಿ ಖರೀದಿಸಲು, ಪೂರೈಸಲು ಮಾತ್ರ ಅವಕಾಶವಿದೆ.

ಅಂತರ ಜಿಲ್ಲಾ, ಅಂತರ್ ರಾಜ್ಯ ಸರಕು ಸಾಗಿಣಿಕೆ ವಾಹನಗಳಿಗೆ ಅವಕಾಶವಿದೆ.

ಪೂರ್ವಾನುಮತಿ ಪಡೆದುಕೊಂಡು ನಿಗದಿಪಡಿಸಿರುವ ಮದುವೆಗಳಿಗೆ ಅವಕಾಶವಿದೆ.

ಅಂದರೆ, ತರಕಾರಿ, ದಿನಸಿ ಖರೀದಿಗಳಿಗೆ ಈಗಿನಂತೆ ಬೆಳಗಿನ ಅವಧಿಯಲ್ಲಿ ಕೂಡ ಅವಕಾಶವಿಲ್ಲ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ