Breaking News

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 3 ಮಹಿಳೆಯರು, ಮೂವರು ಗ್ರಾಹಕರು ಅರೆಸ್ಟ್

Spread the love

ನೋಯ್ಡಾ: ಗ್ರೇಟರ್ ನೋಯ್ಡಾದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಂತ 3 ಪೊಲೀಸ್ ಠಾಣೆ ಪ್ರದೇಶದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತ ಮಹಿಳೆಯರಲ್ಲಿ ಒಬ್ಬಳು ಬಾಡಿಗೆದಾರಳಾಗಿ ವಾಸಿಸುತ್ತಿದ್ದಾಳೆ. ಆಕೆ ಮೊಬೈಲ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಮನೆಗೆ ಆಹ್ವಾನಿಸುತ್ತಿದ್ದಳು. ಬೇರೆ ಮಹಿಳೆಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು.

ಈ ಬಗ್ಗೆ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಲಾಗಿದೆ. ಮೂವರು ಪುರುಷ ಗ್ರಾಹಕರು ಹಾಗೂ ದಂಧೆಯಲ್ಲಿ ತೊಡಗಿದ್ದ ಮೂವರು ಮಹಿಳೆಯರನ್ನು ಬಂಧಿಸಿದ್ದು, 4 ಮೊಬೈಲ್ ಫೋನ್, 9860 ರೂಪಾಯಿ ನಗದು ಹಾಗೂ ಕೆಲವು ಆಕ್ಷೇಪಾರ್ಹ ವಸ್ತುಗಳನ್ನು ಮನೆಯಿಂದ ವಶಪಡಿಸಿಕೊಳ್ಳಲಾಗಿದೆ. ಅನೈತಿಕ ವ್ಯಾಪಾರ ತಡೆ ಕಾಯ್ದೆ 1956 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ