Breaking News

ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಧಗಧಗಿಸಿದ ಅಂಗಡಿಗಳು

Spread the love

ಗದಗ: ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಕಾಂಪ್ಲೆಕ್ಸ್ ನ 3 ಅಂಗಡಿಗಳಲ್ಲಿ ಬೆಂಕಿ ಹೊತ್ತಿಕೊಂಡು ಧಗಧಗಿಸಿರುವ ಘಟನೆ ನಗರದ ಚೇತನಾ ಕ್ಯಾಂಟೀನ್ ಬಳಿ ನಡೆದಿದೆ.

ಬಸನಗೌಡ ನಾಡಗೌಡ್ರ ಅವರಿಗೆ ಸೇರಿದ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಬಟ್ಟೆ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ಆಗಿ, ಬೆಂಕಿ ಹೊತ್ತಿಕೊಂಡಿದೆ. ಲಾಕ್‍ಡೌನ್ ಹಿನ್ನೆಲೆ ಅಂಗಡಿಗಳಲ್ಲಿ ಯಾರು ಇಲ್ಲದಕ್ಕೆ, ಅಕ್ಕ ಪಕ್ಕದ ಕಿರಾಣಿ ಹಾಗೂ ಜನರಲ್ ಸ್ಟೋರ್ ಗೂ ಬೆಂಕಿ ವ್ಯಾಪಿಸಿದೆ. ನಂತರ ದಟ್ಟವಾದ ಹೋಗೆ ಕಂಡು ಸ್ಥಳಿಯರು ಬೆರಗಾಗಿದ್ದಾರೆ.

ತಕ್ಷಣವೇ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳಿಯರು ಬೆಂಕಿ ನಂದಿಸಲು ಮುಂದಾದರು. ಈ ದುರ್ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಗದಗನ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ