Breaking News

ಕೋರೋನ ಹತೋಟಿಗೆ ಬರದಿದಲ್ಲಿ ಲಾಕ್ ಡೌನ್ ಅನಿವಾರ್ಯ: ಉಮೇಶ್ ಕತ್ತಿ

Spread the love

ಬಾಗಲಕೋಟೆ : ರಾಜ್ಯದಲ್ಲಿ ದಿನದಿನವೂ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಜನರು ಅರ್ಥ ಮಾಡಿಕೊಂಡು ಮುನ್ನಡೆಯಬೇಕು. ಇಲ್ಲವಾದಲ್ಲಿ ಲಾಕ್‌ಡೌನ್ ಮುಂದುವರಿಸಲಾಗುತ್ತದೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದರು.

ಬಾಗಲಕೋಟೆಯಲ್ಲಿಂದು ಮಾತನಾಡಿದ ಸಚಿವ ಉಮೇಶ ಕತ್ತಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ 3 ದಿನ ಲಾಕ್ ಡೌನ್ ಮಾಡಬೇಕೆನ್ನುವ ವಿಚಾರ ಮಾಡಿದ್ದಾರೆ. ಸೋಮವಾರ, ಬುಧುವಾರ ಮತ್ತು ಶುಕ್ರವಾರ ಪುಲ್ ಲಾಕ್ ಡೌನ್ ಘೋಷಣೆಯಾಗುತ್ತದೆ ಎಂದರು.

ಜನ ಅಥ೯ ಮಾಡಿಕೊಳ್ಳದೇ ಬರೀ ಸಕಾ೯ರ ಮಾಡಲು ಸಾಧ್ಯವಿಲ್ಲ. ಜನ ಕೈ ಜೋಡಿಸಬೇಕು, ಎಲ್ಲರೂ ಕೂಡಿ ಮಾಡಿದರೆ ಸರಿ ಹೋಗುತ್ತದೆ ಎಂದರು.

ಇನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಲಾಕ್‌ಡೌನ್ ಮಾಡಲು ಪ್ರಧಾನ ಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಅಧಿಕಾರ ಕೊಟ್ಟಿದ್ದಾರೆ.

ಸರ್ಕಾರ-ಜನರು ಸೇರಿಯೇ ಕೊರೋನಾ ಹೋಗಲಾಡಿಸಲು ಕ್ರಮ ಕೈಗೊಳ್ಳಬೇಕಿದೆ. ರಾಜಕಾರಣಿಗಳು, ಡೀಸಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಸೇರಿ ಇವತ್ತು ಸೂಕ್ತ ಕ್ರಮ ಕೈಗೊಂಡು ಪ್ರಧಾನಿ ಅವರ ಮಾತಿನಂತೆ ಮುನ್ನಡೆಯುತ್ತೇವೆ ಎಂದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ