Breaking News

ಮನೆಯಿಂದ ಹೊರ ಬರುವ ಮುನ್ನ ಎಚ್ಚರ: ಬಿಗಿ ಕ್ರಮಕ್ಕೆ ಪೊಲೀಸರಿಗೆ ಗೃಹ ಸಚಿವರ ಸೂಚನೆ

Spread the love

ಬೆಂಗಳೂರು: ಇನ್ನು ಮುಂದೆ ಅನಗತ್ಯವಾಗಿ ಮನೆಯಿಂದ ವಾನಹದೊಂದಿಗೆ ಹೊರಬಂದರೆ ವಾಹನದ ಆಸೆ ಬಿಟ್ಟು, ಕೇಸು ಹಾಕಿಸಿಕೊಳ್ಳಲು ಸಿದ್ದರಾಗಿ. ಯಾಕೆಂದರೆ ಇಂತಹ ಸೂಚನೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪೊಲೀಸರಿಗೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಜನರು ಕೋವಿಡ್ ನಿಯಮ ಪಾಲನೆ ಮಾಡುತ್ತಿಲ್ಲ. ಜಿಲ್ಲೆಯಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಇದ್ದರೂ ಜನ ಅನಗತ್ಯ ಓಡಾಟ ನೆಡೆಸುತ್ತಿದ್ದಾರೆ. ಇದರಿಂದ ಲಾಕ್ ಡೌನ್ ಯಶಸ್ವಿ ಮಾಡಲು ಪೊಲೀಸರು ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುತ್ತಾರೆ. ವಾಹನಗನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದರು.

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಜಿಲ್ಲೆಗಳಲ್ಲೂ ಅನಗತ್ಯವಾಗಿ ಓಡಾಡುವವರಿಗೆ ಕಡಿವಾಣ ಹಾಕಲು ಸೂಚಿಸಲಾಗಿದೆ. ಕೇವಲ ದಂಡ ವಿಧಿಸದೆ ವಾಹನ ಜಪ್ತಿ ಮಾಡಿ, ಪ್ರಕರಣ ದಾಖಲಿಸಲು ಗೃಹ ಸಚಿವರು ಸೂಚನೆ ನೀಡಿದ್ದಾರೆ


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ