Breaking News

ಆಕ್ಸಿಜನ್ ದುರಂತ: ಚಾಮರಾಜನಗರ ಡಿಸಿ ಡಾ.ಎಂ.ಆರ್‌.ರವಿ ಎತ್ತಂಗಡಿ

Spread the love

ಚಾಮರಾಜನಗರ: ಜಿಲ್ಲೆಯಲ್ಲಿ ನಡೆದ ಆಕ್ಸಿಜನ್ ದುರಂತಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರನ್ನು ಹೊಣೆಯಾಗಿಸಿ ಸ್ಥಳ ನೀಡದೇ ಸರ್ಕಾರ ಅವರನ್ನು ಎತ್ತಂಗಡಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಫೆ‌.13ರಂದೇ ಚಾಮರಾಜನಗರ ಡಿಸಿ ರವಿ ಅವರನ್ನು ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಡಾ.ಬಿ‌.ಸಿ.ಸತೀಶ್ ಅವರನ್ನು ನೇಮಕ ಮಾಡಲಾಗಿತ್ತು. ಆದರೆ ಬಳಿಕ ಕೆಲವು ಬೆಳವಣಿಗೆಗಳು ನಡೆದು ರವಿ ಗಡಿಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಮುಂದುವರೆದಿದ್ದರು.

ದುರಂತ ನಡೆದ ಬಳಿಕ ನಡೆದ ನ್ಯಾಯಾಂಗ ತನಿಖೆಯಲ್ಲಿ ರವಿ ಅವರ ವೈಫಲ್ಯ, ನಾಯಕತ್ವ ಪ್ರದರ್ಶಿಸುವಲ್ಲಿ ವಿಫಲರಾಗಿರುವುದರ ಕುರಿತು, ಜೊತೆಗೆ ಕೆಲ ಕಡತಗಳನ್ನು ತಿದ್ದಿರುವ ಬಗ್ಗೆಯೂ ಉಲ್ಲೇಖಿಸಿದ್ದರಿಂದ ಅವರ ವರ್ಗಾವಣೆಗೆ ಒತ್ತಡವಿತ್ತು. ಹೀಗಾಗಿ ಮೂರು ತಿಂಗಳ ಹಿಂದೆ ಮಾಡಿದ್ದ ವರ್ಗಾವಣೆ ಆದೇಶದಂತೆ ಸರ್ಕಾರ ಅವರ ಸ್ಥಾನಕ್ಕೆ ಸತೀಶ್ ನೇಮಕಗೊಳಿಸಿದೆ ಎಂದು ತಿಳಿದುಬಂದಿದೆ.ಮತ್ತೊಂದು ಮೂಲಗಳ ಪ್ರಕಾರ, ಚಾಮರಾಜನಗರ ಡಿಸಿಯಾಗಿ ರವಿ ಅವರೇ ಮುಂದುವರೆಯಬೇಕೆಂದು ಕೆಲ ಬಿಜೆಪಿ ನಾಯಕರು ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ


Spread the love

About Laxminews 24x7

Check Also

ದಕ್ಷಿಣ ಪಿನಾಕಿನಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Spread the loveನವದೆಹಲಿ: ಕರ್ನಾಟಕ  ಹಾಗೂ ತಮಿಳುನಾಡು  ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ