ನವದೆಹಲಿ: ದೇಶದಲ್ಲಿ ಹೆಮ್ಮಾರಿ ಕೊರೊನಾ ಸೋಂಕಿತರ ಸಂಖ್ಯೆ 5,742 ಆಗಿದ್ದು, 174 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಂದೇ ದಿನ 773 ಮಂದಿಗೆ ಸೋಂಕು ದೃಢವಾಗಿದ್ದು, 24 ಗಂಟೆಯಲ್ಲಿ 32 ಮಂದಿ ಸಾವನ್ನಪ್ಪಿದ್ದಾರೆ.
ದೇಶದಲ್ಲಿ 402 ದಿನ ಚೇತರಿಸಿಕೊಂಡಿದ್ದಾರೆ. ಹಾಟ್‍ಸ್ಪಾಟ್‍ಗಳ ಮೇಲೆ ನಿರಂತರವಾಗಿ ನಿಗಾವಹಿಸಿದ್ದೇವೆ ಅಂತ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಮಂಗಳವಾರ ಒಂದು ಸಾವಿರ ಸೋಂಕಿತರ ಗಡಿ ದಾಟಿದ್ದ ಮಹಾರಾಷ್ಟ್ರದಲ್ಲಿ ಬುಧವಾರ ರಾತ್ರಿ 7 ಗಂಟೆಯ ವೇಳೆಗೆ ಸೋಂಕಿತರ ಸಂಖ್ಯೆ 1,100ಕ್ಕೂ ಅಧಿಕವಾಗಿದೆ
ಮಹಾರಾಷ್ಟ್ರ ಆರೋಗ್ಯ ಇಲಾಖೆ ಬುಧವಾರ ರಾತ್ರಿ 7 ಗಂಟೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 117 ಜನ ಸೋಂಕಿತರು ಪತ್ತೆಯಾಗಿದ್ದು, 8 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 72ಕ್ಕೆ ಏರಿದರೆ, ಸೋಂಕಿತರ ಸಂಖ್ಯೆ 1135ಕ್ಕೆ ತಲುಪಿದೆ.
ಆಂಧ್ರಪ್ರದೇಶದ ನೋಡಲ್ ಅಧಿಕಾರಿ ಅರ್ಜಾ ಶ್ರೀಕಾಂತ್ ಮಾತನಾಡಿ, ರಾಜ್ಯದಲ್ಲಿ ಇಂದು 19 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 348 ಜನ ಸೋಂಕಿತರಿದ್ದಾರೆ.
Laxmi News 24×7