Breaking News

ಬಾಗಲಕೋಟೆಯಿಂದ ಗದಗಕ್ಕೆ ಶವ ತಂದ ಕುಟುಂಬಸ್ಥರು, ಆದರೆ ಸೋಂಕಿತ ವೃದ್ಧನ ಶವ ಸಂಸ್ಕಾರಕ್ಕೆ ಗ್ರಾಮಸ್ಥರಿಂದ ವಿರೋಧ

Spread the love

ಗದಗ: ಜಿಲ್ಲೆಯುಲ್ಲಿ ಕೊರೊನಾ ಸೋಂಕಿತ ವೃದ್ಧನ ಶವ ಸಂಸ್ಕಾರಕ್ಕೆ ಗ್ರಮಸ್ಥರು ವಿರೋಧ ವ್ಯಕ್ತಪಡಿಸಿದ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಮರಗೋಳದಲ್ಲಿ ನಡೆದಿದೆ. ಮೂಲತಃ ಅಮರಗೋಳ ಗ್ರಾಮದ 72 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದರು. ಗ್ರಮದಲ್ಲೇ ವೃದ್ಧನ ಶವ ಸಂಸ್ಕಾರ ಮಾಡಲು ಕುಟುಂಬಸ್ಥರು ಚಿಂತಿಸಿದ್ದರು. ಆದರೆ ಗ್ರಾಮದ ಜನ ಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದು ಮಾತಿನ ಚಕಮಕಿ ನಡೆದಿದೆ.

ಮೃತ ವೃದ್ಧ ಗದಗ ಬಿಟ್ಟು ಬಾಗಲಕೋಟೆ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದರು. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ವಿಷಯ ತಿಳಿದ ಬಳಿಕ ಕುಟುಂಬಸ್ಥರು ವೃದ್ಧನ ಅಂತ್ಯ ಸಂಸ್ಕಾರಕ್ಕೆ ಹುಟ್ಟೂರಿಗೆ ಶವ ತಂದಿದ್ದರು. ಈ ವೇಳೆ ಅಂತ್ಯಕ್ರಿಯೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಜೆಸಿಬಿ ಸಹಾಯದಿಂದ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಜಿಲ್ಲೆಯಲ್ಲಿ ಮಳೆಯಾಗಿದ್ದರಿಂದ ಆಯಂಬುಲೆನ್ಸ್ ಹೋಗಲೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಜೆಸಿಬಿಯಲ್ಲಿ ಶವ ಹಾಕಿಕೊಂಡು ಹೋಗಿ ಜೆಸಿಬಿ ಮೂಲಕ ತಮ್ಮ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಗ್ರಾಮದ ರುಧ್ರಭೂವಿಯಲ್ಲಿ ಶವ ಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿದೆ.

ಜೆಸಿಬಿ ಮೂಲಕ ಮೃತ ಸೋಂಕಿತ ವೃದ್ಧನ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬಸ್ಥರು

ಜೆಸಿಬಿ ಮೂಲಕ ಮೃತ ಸೋಂಕಿತ ವೃದ್ಧನ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬಸ್ಥರು


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ