ಕೊಪ್ಪಳ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪ್ರಧಾನಿ ಮೋದಿ ಕಿರುಕುಳ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ರಾಜ್ಯದ 25 ಸಂಸದರನ್ನು ಕೂಡಾ ಪ್ರಧಾನಿ ಮೋದಿ ತನ್ನ ಹತ್ತಿರಕ್ಕೆ ಬಿಟ್ಟುಕೊಳ್ಳುತ್ತಿಲ್ಲ. ಪ್ರಧಾನಿಗೆ ಕರ್ನಾಟಕ ಎಂದರೆ ಅಲರ್ಜಿ ಆಗಿದೆ ಎಂದು ಹೇಳಿದ್ದಾರೆ.
ಯಡಿಯೂರಪ್ಪ ತಾವಾಗಿಯೇ ಸಿಎಂ ಖುರ್ಚಿ ಖಾಲಿ ಮಾಡಲಿ ಎನ್ನುವ ಕಾರಣಕ್ಕೆ ಕರ್ನಾಟಕಕ್ಕೆ ಅನುದಾನವನ್ನು ಸೂಕ್ತವಾಗಿ ಕೊಡದೇ ನಿರ್ಲಕ್ಷ್ಯ ತೊರುತ್ತಿದ್ದಾರೆ. ಮೋದಿ ಅವರು ಡಿ.ವಿ.ಸದಾನಂದಗೌಡ ಸೇರಿದಂತೆ ರಾಜ್ಯದ ಯಾವ ಸಂಸದರನ್ನು ಹತ್ತಿರಕ್ಕೆ ಬಿಟ್ಟುಕೊಳ್ಳುತ್ತಿಲ್ಲ. ಇಂತಹ ಸಮಯದಲ್ಲಿ ಜನ ಸಾಮಾನ್ಯರ ರಕ್ಷಣೆ ಮಾಡುವ ಕೆಲಸ ಮಾಡಬೇಕಿತ್ತು. ಆದರೆ ಮೋದಿ ಅದನ್ನು ಮಾಡುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Laxmi News 24×7