Breaking News

ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಹಿರಿಯ ಅಧಿಕಾರಿಗಳೇ ಕಾರ್ಯಾಚರಣೆಗಿಳಿದಿದ್ದಾರೆ.

Spread the love

ಬೆಳಗಾವಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದ್ದು, ಇಂದಿನಿಂದಲೇ ಕಠಿಣ ರೂಲ್ಸ್ ಗಳು ಜಾರಿಗೆ ಬಂದಿವೆ. ಕಟ್ಟುನಿಟ್ಟಿನ ಲಾಕ್ ಡೌನ್ ಗೆ ಸಿಎಂ ಯಡಿಯೂರಪ್ಪ ಸೂಚಿಸಿದ ಬೆನ್ನಲ್ಲೇ ಫೀಲ್ಡಿಗಿಳಿದ ಪೊಲೀಸರು ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ.

ಬೆಳಗಾವಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಸಂಪೂರ್ಣ  ಲಾಕ್ ಡೌನ್ ಜಾರಿಯಾಗಿದ್ದು, ಹಾಲು, ಔಷಧ ಹೊರತುಪಡಿಸಿ ಬೇರೆ ಯಾವುದಕ್ಕೂ ಅವಕಾಸ ನೀಡಲಾಗಿಲ್ಲ. ಆಸ್ಪತ್ರೆಗೆ ತೆರಳುವವರು ಮಾತ್ರ ರಸ್ತೆಗೆ ಇಳಿಯಲು ಅವಕಾಶ ಕಲ್ಪಿಸಲಾಗಿದೆ.

ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಹಿರಿಯ ಅಧಿಕಾರಿಗಳೇ ಕಾರ್ಯಾಚರಣೆಗಿಳಿದಿದ್ದಾರೆ. ಅಲ್ಲಲ್ಲಿ ನಿಂತು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಅನಗತ್ಯ ಓಡಾಟ ಎಂದು ಕಂಡು ಬಂದಲ್ಲಿ ಕೂಡಲೇ ವಾಹನ ಸೀಜ್ ಮಾಡುತ್ತಿದ್ದಾರೆ.

ಇಂದು ಮತ್ತು ನಾಳೆಯೂ ಇದೇ ರೀತಿ ಮುಂದುವರಿಯಲಿದೆ. ಸೋಮವಾರ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ.

 


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ