Breaking News

ಡಾಕ್ಟರ್ ಆದ ಫಾರ್ಮಸಿಸ್ಟ್‍ಗೆ ಖಾಕಿ ಟ್ರಿಟ್ಮೆಂಟ್ !

Spread the love

ಚಿತ್ರದುರ್ಗ :ಸರ್ಕಾರಿ ಆಸ್ಪತ್ರೆಯಲ್ಲಿ ಫಾರ್ಮ್ ಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ನಡೆಸುತಿದ್ದ ಖಾಸಗಿ ಕ್ಲಿನಿಕ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಗ್ರಾಮದಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ವಿವೇಕಾನಂದನನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡ ಶುಕ್ರವಾರ ತಡರಾತ್ರಿ ದಾಳಿ ನಡೆಸಿದೆ. ದಾಳಿ ವೇಳೆ ಸಾವಿರಾರು ರೂ. ಮೌಲ್ಯದ ಔಷಧಿಗಳು ಹಾಗೂ ನಗದು ವಶಪಡಿಸಿಕೊಂಡಿದ್ದಾರೆ.

ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವಿವೇಕಾನಂದ ಸರ್ಕಾರದಿಂದ ಬರುವ ಔಷಧಿ, ಇಂಜೆಕ್ಷನ್, ಮಾತ್ರೆಗಳು, ಸಿರೆಂಜ್‍ಗಳು, ಹಾಗೂ ಸರ್ಕಾರದ ಔಷಧಿಗಳನ್ನು ದುರುಪಯೋಗ ಪಡಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.

ಜವನಗೊಂಡನಹಳ್ಳಿಯ ಮನೆಯಲ್ಲಿ ಅನಧಿಕೃತವಾಗಿ ಖಾಸಗಿ ಕ್ಲಿನಿಕ್ ಇಟ್ಟುಕೊಂಡು ರೋಗಿಗಳಿಗೆ ಔಷಧ ಮಾರಾಟ ಮಾಡಿ ಹಣಗಳಿಸುತ್ತಿದ್ದನು ಎಂದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ. ಸರ್ಕಾರಿ ಆಸ್ಪತ್ರೆಯ ಔಷಧಿಗಳನ್ನು ದುರುಪಯೋಗ ಪಡಿಸಿಕೊಂಡು ಮಾರಾಟ ಮಾಡಿ ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದ, ಆರೋಪಿ ವಿರುದ್ಧ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಹಸೀಲ್ದಾರ್ ಜಿ.ಎಚ್.ಸತ್ಯನಾರಾಯಣ, ಸಿಪಿಐ ರಾಘವೇಂದ್ರ, ಟಿಎಚ್‍ಒ ಡಾ.ವೆಂಕಟೇಶ್ ನೇತೃತ್ವದ ಜಂಟಿ ತಂಡ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ