Breaking News

ಕೊರೊನಾ ಸೋಂಕಿಗೆ ಆಯುರ್ವೇದ ಔಷಧ : ವೈದ್ಯನ ಮನೆ ಮುಂದೆ ಮುಗಿಬಿದ್ದ ಜನರು

Spread the love

ಹೈದರಾಬಾದ್: ಕೊರೊನಾ ಸೋಂಕಿಗೆ ವೈದ್ಯರೊಬ್ಬರು ಆಯುರ್ವೇದ ಔಷಧವೊಂದನ್ನು ಕಂಡುಹಿಡಿದಿದ್ದು, ಔಷಧಕ್ಕಾಗಿ ಜನರು ವೈದ್ಯನ ಮನೆ ಮುಂದೆ ಮುಗಿಬಿದ್ದ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ.

ಆಯುರ್ವೇದ ವೈದ್ಯ ಆನಂದಯ್ಯ ಎಂಬುವವರು ಕೊರೊನಾ ಸೋಂಕಿಗೆ ಔಷಧವನ್ನು ಕಂಡು ಹಿಡಿದಿದ್ದು, ಸೋಂಕಿತರ ಚಿಕಿತ್ಸೆಗಾಗಿ ಈ ಔಷಧ ನೀಡುತ್ತಿದ್ದಾರೆ.

ಇನ್ನು ಔಷಧಿಗಾಗಿ ಜನರು ಆಗಮಿಸುತ್ತಿದ್ದು, ಸ್ಥಳದಲ್ಲಿ 10 ಸಾವಿರಕ್ಕೂ ಅಧಿಕ ಜನರು ಕಿಲೋಮೀಟರ್ ಗಟ್ಟಲೇ ಉದ್ದ ಸರತಿ ಸಾಲಿನಲ್ಲಿ ನಿಂತಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆನಂದಯ್ಯ ಆಯುರ್ವೆದಿಕ್ ಮೆಡಿಸಿನ್ ಬಗ್ಗೆ ಅಧ್ಯಯನ ನಡೆಸಲು ಈ ಔಷಧವನ್ನು ಐಸಿಎಂಆರ್ ಕಳುಹಿಸಲು ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆ

Spread the love ಬೆಳಗಾವಿಯಲ್ಲಿ ಡಿ.8ರಿಂದ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿ ಹಾಗೂ ಉಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ