Breaking News

ಕೊಲೆ ಪ್ರಕರಣದಲ್ಲಿ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಬಂಧನ

Spread the love

ನವದೆಹಲಿ: ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಅವರ ಬಲಗೈ ಬಂಟ ಅಜಯ್ ಎಂಬಾತನನ್ನು ಪಂಜಾಬ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸುಶೀಲ್ ಕುಮಾರ್ ಅವರನ್ನು ಪಂಜಾಬ್ ಪೊಲೀಸರು ದೆಹಲಿ ಪೊಲೀಸರಿಗೆ ಒಪ್ಪಿಸಲಿದ್ದಾರೆ. ಇದಕ್ಕೂ ಮೊದಲು ದೆಹಲಿ ಕೋರ್ಟ್ ಸುಶೀಲ್ ಕುಮಾರ್‌ಗೆ ಜಾಮೀನು ನೀಡಲು ನಿರಾಕರಿಸಿತ್ತು.
ಸುಶೀಲ್ ಕುಮಾರ್ 2008ರ ಬಿಜಿಂಗ್ ಹಾಗೂ 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದ್ದರು. ದೆಹಲಿಯ ಉತ್ತರ ಭಾಗದಲ್ಲಿರುವ ಚಾಸ್ಟ್ರಾಸಾಲ್ ಸ್ಟೇಡಿಯಂ ಹೊರಗೆ ಕುಸ್ತಿ ಪಟು ಸಾಗರ್ ರಾಣಾ ಅವರನ್ನು ಕೊಲೆಗೈದು ಹಾಗೂ ಆತನ ಎರಡು ಸ್ನೇಹಿತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಶೀಲ್ ಹಾಗೂ ಸ್ನೇಹಿತರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಸಂತ್ರಸ್ಥರನ್ನು ವಿಚಾರಣೆಗೆ ಒಳಪಡಿಸಿದ್ದು, ಎಲ್ಲರೂ ಸುಶೀಲ್ ಕುಮಾರ್ ಹೆಸರನ್ನು ಹೇಳಿದ್ದಾರೆ ಎಂದು ವರದಿಯಾಗಿದೆ


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ