Breaking News

ಜೂನ್ 7 ರ  ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ

Spread the love

ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ  ಜೂನ್ 7 ರ  ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೋರೊನಾ ವೈರಸ್‌ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ  ಮೇ.12ರ ರಾತ್ರಿ 9 ಗಂಟೆಯಿಂದ ಮೇ.24 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು.
ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ ಕಂಡುಬರುತ್ತಿರುವುದರಿಂದ ಮೇ.24 ರ ಬೆಳಿಗ್ಗೆ 6 ಗಂಟೆಯವರೆಗೆ ಇರುವ ನೀಷೆಧಾಜ್ಞೆಯನ್ನು ಜೂನ್ 7 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು  ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.
ಅವಶ್ಯಕ ಚಟುವಟಿಕೆಗಳು ಹಾಗೂ ತಾಲೂಕಾ ಮಟ್ಟದ ವಿಪತ್ತು ನಿರ್ವಹಣಾ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ.ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳಾದ ಎಂ.ಜಿ.ಹಿರೇಮಠ ಅವರು ಎಚ್ಚರಿಕೆ ನೀಡಿದ್ದಾರೆ.

Spread the love

About Laxminews 24x7

Check Also

ಶಾಸಕ ಭರಮಗೌಡ (ರಾಜು) ಕಾಗೆಗೆ ಒಲಿದು ಬಂದ ಅದೃಷ್ಟ

Spread the love  ಸಚಿವ ಸತೀಶ್ ಜಾರಕಿಹೊಳಿಯವರ ಮಧ್ಯಸ್ಥಿಕೆಯಲ್ಲಿ ನಡೆದ ಕಾಗವಾಡ ಕ್ಷೇತ್ರದ ಅವಿರೋಧ ಆಯ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ