Breaking News

ಮೇ 26ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲು ರೈತ ಸಂಘಗಳು ನಿರ್ಧಾರ : 12 ಪ್ರತಿಪಕ್ಷಗಳ ಬೆಂಬಲ

Spread the love

ನವದೆಹಲಿ : ಕೇಂದ್ರ ಜಾರಿಗೆ ತಂಡ ಕೃಷಿ ಮಸೂದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಆರು ತಿಂಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಮೇ 26ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲು ಸಂಯುಕ್ತ ಕಿಸಾನ್‌ ಮೋರ್ಚಾ ನಿರ್ಧರಿಸಿದ್ದು, ಅದಕ್ಕೆ 12 ಪ್ರತಿಪಕ್ಷಗಳು ಬೆಂಬಲ ಸೂಚಿಸಿವೆ.

 

ಮೇ 26ಕ್ಕೆ ಪ್ರತಿಭಟನೆಗೆ ಆರು ತಿಂಗಳು ಪೂರ್ಣಗೊಳ್ಳಲಿದ್ದು, ಅಂದು ದೇಶವ್ಯಾಪಿ ಪ್ರತಿಭಟನೆಗೆ ಕಿಸಾನ್‌ ಮೋರ್ಚಾ ಕರೆ ನೀಡಿದೆ. ಇದಕ್ಕೆ ಕಾಂಗ್ರೆಸ್‌, ಟಿಎಂಸಿ, ಜೆಡಿಎಸ್‌ ಸೇರಿದಂತೆ 12 ಪ್ರತಿಪಕ್ಷಗಳು ಬೆಂಬಲ ಘೋಷಿಸಿವೆ.

 

ಈ ಸಂಬಂಧ ಸೋನಿಯಾ ಗಾಂಧಿ (ಕಾಂಗ್ರೆಸ್‌), ಎಚ್‌.ಡಿ.ದೇವೇಗೌಡ (ಜೆಡಿಎಸ್‌), ಶರದ್‌ ಪವಾರ್‌ (ಎನ್‌ಸಿಪಿ), ಮಮತಾ ಬ್ಯಾನರ್ಜಿ (ಟಿಎಂಸಿ), ಉದ್ಧವ್‌ ಠಾಕ್ರೆ (ಶಿವಸೇನೆ), ಎಂ.ಕೆ.ಸ್ಟಾಲಿನ್‌ (ಡಿಎಂಕೆ), ಹೇಮಂತ್‌ ಸೊರೇನ್‌ (ಜೆಎಂಎಂ), ಅಖಿಲೇಶ್‌ ಯಾದವ್‌ (ಎಸ್‌ಪಿ), ತೇಜಸ್ವಿ ಯಾದವ್‌ (ಆರ್‌ಜೆಡಿ) ಸೇರಿ 12 ಮುಖಂಡರು ಭಾನುವಾರ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ