Breaking News

ವಿಡಿಯೋ; ಚಿತ್ರದುರ್ಗ ಜಿಲ್ಲಾಸ್ಪತ್ರೆ ವಾರ್ಡ್‌ನಲ್ಲಿ ನಾಯಿ ಸಂಚಾರ

Spread the love

ಚಿತ್ರದುರ್ಗ, ಮೇ 25; ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಇರುವುದಿಲ್ಲ, ಒಂದೊಂದು ಸಮಯದಲ್ಲಿ ಕುಳಿತುಕೊಳ್ಳಲು ಜಾಗವಿರುವುದಿಲ್ಲ. ಇಂತಹ ಸಂದರ್ಭದಲ್ಲಿ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಬೀದಿ ನಾಯಿಗಳ ಓಡಾಟ ನಡೆಸುತ್ತಿವೆ. ನಾಯಿಗಳ ಓಡಾಟದ ವಿಡಿಯೋ ವೈರಲ್ ಆಗಿದೆ.

ತಡರಾತ್ರಿ ಎರಡು ಗಂಟೆ ಸಮಯದಲ್ಲಿ ರೋಗಿಗಳು ಇರುವ ವಾರ್ಡ್‌ನಲ್ಲಿಯೇ ನಾಯಿಗಳು ಓಡಾಟ ನಡೆಸುತ್ತಿವೆ. ಜಿಲ್ಲಾಸ್ಪತ್ರೆಯಲ್ಲಿ ಏಲ್ಲಿ ನೋಡಿದರೂ ರಾಜಾ ರೋಷವಾಗಿ ನಾಯಿಗಳು ಓಡಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

 

ಸುಮಾರು 5 ನಾಯಿಗಳ ಗುಂಪು ಆಸ್ಪತ್ರೆಯ ರೋಗಿಗಳ ವಾರ್ಡ್‌ನಲ್ಲಿ ಓಡಾಡಿವೆ. ನಾಲ್ಕೈದು ದಿನಗಳ ಹಿಂದೊಮ್ಮೆ ನಾಯಿಗಳ ಓಡಾಟದ ವೀಡಿಯೋ ಹರಿದಾಡಿತ್ತು. ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಜನರದ್ದು.

 

ನಾಯಿಗಳ ಓಡಾಟ ನೋಡಿ ರೋಗಿಗಳು ಆಸ್ಪತ್ರೆ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇ ಪದೇ ಜಿಲ್ಲಾಸ್ಪತ್ರೆಗೆ ನಾಯಿಗಳು ನುಗ್ಗುತ್ತಿದ್ದರು ಆರೋಗ್ಯಾಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ರೋಗಿಗಳ ಸಂಬಂಧಿಕರು ದೂರಿದ್ದಾರೆ.

“ನಾನು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದೆ, ರಾತ್ರಿ 2 ಗಂಟೆ ಸಮಯದಲ್ಲಿ ಸುಮಾರು ಐದು ನಾಯಿಗಳು ವಾರ್ಡ್ ಒಳಗಡೆ ಬಂದು ಓಡಾಟ ನಡೆಸಿದವು. ನಮಗೆ ರಾತ್ರಿಯೆಲ್ಲಾ ನಿದ್ದೆ ಬರಲಿಲ್ಲ. ಇಲ್ಲಿ ಯಾರು ಹೇಳುವವರು, ಕೇಳುವವರು ಇಲ್ಲ” ಎಂದು ರೋಗಿಯೊಬ್ಬರು ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ