Breaking News

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ; ಹಿರಿಯ ನಟ ಕೃಷ್ಣೇಗೌಡ ವಿಧಿವಶ

Spread the love

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಕನ್ನಡ ಚಿತ್ರರಂಗ ಒಬ್ಬರ ಹಿಂದೊಬ್ಬರಂತೆ ಹಿರಿಯ ಕಲಾವಿದರನ್ನು ಕಳೆದುಕೊಳ್ಳುತ್ತಿದೆ. ಇದೀಗ ಹಿರಿಯ ನಟ, ರಂಗಭೂಮಿ ಕಲಾವಿದ ಕೃಷ್ಣೇಗೌಡ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

80 ವರ್ಷದ ಕೃಷ್ಣೇಗೌಡ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಇತ್ತೀಚೆಗೆ ಮತ್ತೆ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ರಂಗಭೂಮಿ ಹಿನ್ನೆಲೆಯಿಂದ ಬಂದು ಚಿತ್ರರಂಗಕ್ಕೆ ಕಾಲಿಟ್ಟಿದ್ದ ಕೃಷ್ಣೇಗೌಡ ಪೋಷಕ ಪಾತ್ರಗಳಿಗೆ ಬಹುಬೇಡಿಕೆಯ ಕಲಾವಿದರಾಗಿದ್ದರು. ಹಿರಿಯ ನಟನ ಅಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.


Spread the love

About Laxminews 24x7

Check Also

ಶಾಲಾ ಮಕ್ಕಳ ಆತ್ಮಹತ್ಯೆ ತಡೆಗೆ ನೀತಿ ಜಾರಿ – ಮಹದೇವಪ್ಪ

Spread the loveಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ, ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ