Breaking News

ಬೆಳಗಾವಿ: ಜಿಲ್ಲೆ ಮೇ 29 ಹಾಗೂ ಮೇ 30 ರಂದು ಸಂಪೂರ್ಣ ಲಾಕ್ ಡೌನ್: ಎಂ.ಜಿ.ಹಿರೇಮಠ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಕೋರೊನಾ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಮೇ 29 ಹಾಗೂ ಮೇ 30 ರಂದು ಎರಡು ದಿನಗಳ ಕಾಲ ವಾರಾಂತ್ಯದ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಕೋವಿಡ್-19 ಹರಡುವುದನ್ನು ತಡೆಗಟ್ಟಲು ಮೇ 29ರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಅನಾವಶ್ಯಕವಾಗಿ ಓಡಾಡುವುದನ್ನು ಸಂಪೂರ್ಣವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರಡಿ ನಿಷೇಧಿಸಿ ಆದೇಶಿಸಲಾಗಿತ್ತು. ಆದರೆ, ಬೆಳಗಾವಿ ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಮೇ 29ರ ಬೆಳಗ್ಗೆ 6 ಗಂಟೆಯಿಂದ ಮೇ 31ರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅವಕಾಶ: ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಂಚರಿಸಲು, ಅಗತ್ಯ ವಸ್ತುಗಳಾದ ಹಾಲು, ಔಷಧಿ ಪೂರೈಕೆ ಮತ್ತು ಖರೀದಿಗೆ ಹಾಗೂ ಅಂತರ್‌ರಾಜ್ಯ ಹಾಗೂ ಅಂತರ್ ಜಿಲ್ಲೆಗಳಿಗೆ ಸಂಚರಿಸುವ ಸರಕು ಮತ್ತು ಸಾಗಾಣಿಕಾ ವಾಹನಗಳಿಗೆ ಮಾತ್ರ ‌ಅವಕಾಶ ನೀಡಲಾಗಿದೆ.

ಆದೇಶದಲ್ಲಿ ಸೂಚಿಸಿರುವ ದಿನಗಳಂದು ಈಗಾಗಲೇ ಪೂರ್ವಾನುಮತಿ ಪಡೆದುಕೊಂಡು ನಿಗದಿಪಡಿಸಿರುವಂತಹ ಮದುವೆ ಸಮಾರಂಭಗಳಿಗೆ ಮಾತ್ರ ಅವಕಾಶವಿದೆ‌ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ