Breaking News

ನನ್ನ ಬಂಧಿಸುವ ಧೈರ್ಯ ಯಾರಿಗೂ ಇಲ್ಲ: ಐಎಂಎಗೆ ಸೆಡ್ಡುಹೊಡೆದ ಬಾಬಾ ರಾಮ್ ದೇವ್

Spread the love

ನವದೆಹಲಿ: ಅಲೋಪತಿ ಮೂರ್ಖತನದ ಪದ್ಧತಿ ಎಂದು ಟೀಕಿಸಿದ್ದ ಯೋಗ ಗುರು ಬಾಬಾ ರಾಮ್ ದೇವ್ ಮತ್ತೆ ತಮ್ಮ ವಾಗ್ದಾಳಿ ಮುಂದುವರಿಸಿದ್ದು, ನನ್ನನ್ನು ಬಂಧಿಸುವ ಧೈರ್ಯ ಯಾರಿಗೂ ಇಲ್ಲ ಎಂದು ಹೇಳುವ ಮೂಲಕ ಭಾರತೀಯ ವೈದ್ಯಕೀಯ ಸಂಘಕ್ಕೆ ಸಡ್ಡುಹೊಡೆದಿದ್ದಾರೆ.

ಅಲೋಪತಿ ಮೂರ್ಖತನದ ವಿಜ್ಞಾನ ಎಂದು ಟೀಕಿಸಿದ್ದ ಯೋಗ ಗುರು ಬಾಬಾ ದೇವ್ ಅವರನ್ನು ದೇಶದ್ರೋಹ ಆರೋಪದ ಮೇಲೆ ಬಂಧಿಸುವಂತೆ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (ಐಎಂಎ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡ ಬೆನ್ನಲ್ಲೇ ಯೋಗಗುರು ಬಾಬಾ ರಾಮ್ ದೇವ್ ಬಿಡುಗಡೆ ಮಾಡಿರುವ ಹೊಸ ವಿಡಿಯೋದಲ್ಲಿ “ನನ್ನ ಬಂಧಿಸುವ ಧೈರ್ಯ ಯಾರಿಗೂ ಇಲ್ಲ” ಎಂದು ಹೇಳಿರುವುದು ದಾಖಲಾಗಿದೆ.

“ಅವರ ಅಪ್ಪನಿಂದಲೂ ನನ್ನ ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿ ಸಡ್ಡುಹೊಡೆದಿರುವ ಒಂದು ವಿಡಿಯೋವನ್ನು ಕಾಂಗ್ರೆಸ್ ಮುಖಂಡ ಗೌರವ್ ಪಾಂಡಿ ಟ್ವೀಟರ್ ನಲ್ಲಿ ಶೇರ್ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಟ್ಯಾಗ್ ಮಾಡಿ, ಒಂದು ವೇಳೆ ಏನಾದರೂ ಕ್ರಮ ತೆಗೆದುಕೊಳ್ಳಬಹುದೇ ಎಂದು ಅಚ್ಚರಿವ್ಯಕ್ತಪಡಿಸಿದ್ದಾರೆ.

ರಾಮ್ ದೇವ್ ಅವರನ್ನು ಬಂಧಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರು ಕೇವಲ ಶಬ್ದ ಮಾಡುತ್ತಿದ್ದಾರೆ ಅಷ್ಟೇ, ಅವರು ಏನಾದರೂ ಮಾಡಿಕೊಳ್ಳಲಿ ಎಂದು ಯೋಗ ಗುರು ಹೇಳಿರುವುದು ವಿಡಿಯೋದಲ್ಲಿ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ