Breaking News

ಕೋವಿಡ್-19 ಸೋಂಕಿತರು ಉಚಿತ ಚಿಕಿತ್ಸೆ ಪಡೆಯಬಹುದು: ಎಂ.ಜಿ.ಹಿರೇಮಠ

Spread the love

ಬೆಳಗಾವಿ: ನೋಂದಾಯಿತ ಖಾಸಗಿ ಆಸ್ಪತ್ರೆಗಳ ಕಾಯ್ದಿರಿಸಿದ ಹಾಸಿಗೆಗಳಲ್ಲಿ ಕೋವಿಡ್-19 ಸೋಂಕಿತರು ಉಚಿತ ಚಿಕಿತ್ಸೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಸರ್ಕಾರದ ನಿರ್ದೇಶನದಂತೆ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 50 ರಷ್ಟು ಹಾಸಿಗೆಗಳನ್ನು ಕೋವಿಡ್-19 ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಕಾಯ್ದಿರಿಸಲಾಗಿದೆ ಎಂದಿದ್ದಾರೆ.

ಜಿಲ್ಲೆಯಲ್ಲಿ 06 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 9 ತಾಲೂಕಾ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಕೋವಿಡ್-19 ರ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸರಕಾರಿ ಆಸ್ಪತ್ರೆಗಳಲ್ಲಿ ಕೋವಿಡ್-19 ರ ಸೋಂಕಿತರಿಂದ ಹಾಸಿಗೆಗಳು ಭರ್ತಿಯಾಗುತ್ತಿದ್ದರೂ ಕೂಡ ಆಸ್ಪತ್ರೆಗಳಿಗೆ ಸೋಂಕಿತರು ಹೆಚ್ಚಾಗಿ ಚಿಕಿತ್ಸೆಗೆ ಬರುತ್ತಿದ್ದಾರೆ. ಆದ್ದರಿಂದ, ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆ ಹಾಗೂ ಉಚಿತ ಚಿಕಿತ್ಸೆ ದೊರಕುವಂತೆ ಜಿಲ್ಲಾಡಳಿತವು ಕ್ರಮ ವಹಿಸುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಹಾಸಿಗೆಗಳ (Bed’s) ಲಭ್ಯತೆ ಹಾಗೂ ಹಂಚಿಕೆ ಕುರಿತು ಮಾಹಿತಿಯನ್ನು ಜಿಲ್ಲಾ ಕೋವಿಡ್ ವಾರ್ ರೂಂ ನ ದೂರವಾಣಿ ಸಂಖ್ಯೆ 0831-2436960 ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ