Breaking News

ಮೇ 31, ಜೂನ್ 1 ರಂದು ಸಿನಿಮಾ ಕಲಾವಿದರಿಗೆ ಉಚಿತ ಕೋವಿಡ್ ಲಸಿಕೆ

Spread the love

ಚಿತ್ರರಂಗದ ಸದಸ್ಯರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಮೇ 31 ಹಾಗೂ ಜೂನ್ 1 ರಂದು ಎರಡು ದಿನಗಳ ಕಾಲ ಸ್ಯಾಂಡಲ್‌ವುಡ್ ಇಂಡಸ್ಟ್ರಿಯ ನೋಂದಾಯಿತ ಕಲಾವಿದರಿಗೆ ಲಸಿಕೆ ನೀಡಲು ಕಾರ್ಯಕ್ರಮ ಆಯೋಜನೆಯಾಗಿದೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಭವನ ಕಟ್ಟಡದಲ್ಲಿ ಉಚಿತ ಕೋವಿಡ್ ಲಸಿಕೆ ಅಭಿಯಾನಕ್ಕೆ ಡಿಸಿಎಂ ಅಶ್ವಥ್ ನಾರಾಯಣ, ಸಂಸದೆ ಸುಮಲತಾ ಚಾಲನೆ ನೀಡಲಿದ್ದಾರೆ.

ಈ ವೇಳೆ ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಕಲಾವಿದರ ಸಂಘದ ಕಾರ್ಯದರ್ಶಿ ರಾಕ್‌ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಹಾಗೂ ಬಿಬಿಎಂಪಿ ಆಯುಕ್ತ ಹಾಗೂ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಈ ಕುರಿತು ಸಮುಲತಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ”ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಿಂದ ಸದಸ್ಯರಿಗೆ 31-5-21 ಮತ್ತು 1-6-21 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೂ ಡಾ: ಅಂಬಿ ಆಡಿಟೋರಿಯಂ, ಚಾಮರಾಜಪೇಟೆಯಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮೊದಲನೇ ಅಥವಾ ಎರಡನೇ ಲಸಿಕೆಗಾಗಿ ಆಧಾರ್ ಕಾರ್ಡ್ ಸಹಿತ, ಕೋವಿಡ್ ನಿಯಮ ಪಾಲಿಸಿ ಬಂದು ಸೌಲಭ್ಯ ಪಡೆಯಬೇಕು.” ಎಂದು ತಿಳಿಸಿದ್ದಾರೆ.

ಇದಕ್ಕೂ ಮುಂಚೆ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ನಿರ್ದೇಶಕ ನಾಗಣ್ಣ, ಸಾರಾ ಗೋವಿಂದು ಸೇರಿದಂತೆ ಹಲವರು ಆರೋಗ್ಯ ಸಚಿವ ಸುಧಾಕರ್‌ರನ್ನು ಭೇಟಿ ಮಾಡಿ ಚಿತ್ರರಂಗದ ಸದಸ್ಯರಿಗೆ ಕೋವಿಡ್ ಲಸಿಕೆ ನೀಡುವಂತೆ ಮನವಿ ಸಲ್ಲಿಸಿದ್ದರು.

ಚಿತ್ರರಂಗದ ಸಮಸ್ಯೆಯಲ್ಲಿದೆ. ಇಂಡಸ್ಟ್ರಿಯಲ್ಲಿ ಕೆಲಸ ಮಾಡುವವರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುಬೇಕು ಎಂದು ಸಿಎಂ ಭೇಟಿ ಮಾಡಿದ್ದರು. ಸಾಧ್ಯವಾದರೆ ಚಿತ್ರರಂಗಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮನವಿ ಸಹ ಸಲ್ಲಿಸಿದ್ದರು.

ಚಿತ್ರ ಕಲಾವಿದರ ಜೊತೆ ರಂಗಭೂಮಿ ಕಲಾವಿದರು, ತಂತ್ರಜ್ಞರು ಸಹ ಕಲಾವಿದರ ಭವನದಲ್ಲಿ ಉಚಿತ ಕೋವಿಡ್ ಲಸಿಕೆ


Spread the love

About Laxminews 24x7

Check Also

ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಈ ವರ್ಷ ರಾಜ್ಯಾದ್ಯಂತ ವಿಸ್ತರಣೆ: ಸಚಿವ ದಿನೇಶ್ ಗುಂಡೂರಾವ್

Spread the loveಬೆಂಗಳೂರು: ಹೃದಯಾಘಾತದಿಂದ ಮರಣವಾಗುವವರ ಸಂಖ್ಯೆ ಅಧಿಕವಾಗುತ್ತಿದ್ದು, ಇದನ್ನ ನಿಯಂತ್ರಿಸಲು ಈ ವರ್ಷದಿಂದಲೇ ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ