Breaking News

ಸಿದ್ದರಾಮಯ್ಯಗೆ ತೀವ್ರ ಜ್ವರ: ಮಣಿಪಾಲ್‌ಗೆ ದಾಖಲು

Spread the love

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳವಾರ ಬೆಳಿಗ್ಗೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ, ಮುಂದಿನ ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಪಡೆಯಲಿದ್ದು, ಅವರು ಮಂಗಳವಾರ ಮತ್ತು ಬುಧವಾರ ಭಾಗವಹಿಸಲಿದ್ದ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ’ ಎಂದು ಆಪ್ತ ಮೂಲಗಳು ಮಾಹಿತಿ ನೀಡಿವೆ.

ಆದರೆ, ಮಧ್ಯಾಹ್ನ ವೇಳೆಗೆ ಜ್ವರ ಕಡಿಮೆ ಆಗದ ಕಾರಣ, ವೈದ್ಯರ ಸಲಹೆ ಮೇರೆಗೆ ಅವರನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗಿದೆ ಎಂದೂ ತಿಳಿಸಿವೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ