Breaking News

ಸೋಂಕು ಕಡಿಮೆ ಆಗದಿದ್ದರೆ ಅನ್ ಲಾಕ್ ಇಲ್ಲ: ಡಿಸಿಎಂ ಸವದಿ

Spread the love

ಬೆಂಗಳೂರು, ಜೂ. 1- ರಾಜ್ಯದಲ್ಲಿ ಏಕ ಕಾಲಕ್ಕೆ ಅನ್ ಲಾಕ್ ಬೇಡ. ಹಂತ ಹಂತವಾಗಿ ಅನ್ ಲಾಕ್ ಮಾಡಿದರೆ ಸೂಕ್ತ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದರು‌. ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಆಶ್ರಯದಲ್ಲಿ ಇಂದು ಸಾರಿಗೆ ಸಿಬ್ಬಂದಿಗಳಿಗೆ ಎರಡನೆಯ ಹಂತದಲ್ಲಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವ ಆಂದೋಲನಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಲಾಕ್ ಡೌನ್ ಮಾಡಿದ್ದರಿಂದ ರಾಜ್ಯದಲ್ಲಿ ಕೋವಿಡ್ ಪಾಸಿಟೀವ್ ಪ್ರಮಾಣ ಕಡಿಮೆಯಾಗಿದೆ. ಅನ್ ಲಾಕ್ ಬಗ್ಗೆ ತಜ್ಞರ ಜತೆ ನಾಳೆ ಸಮಾಲೋಚನೆ ಮಾಡಲಾಗುವುದು. ಆ ನಂತರ ಅಂತಿಮ ತೀರ್ಮಾನ ವಾಗಲಿದೆ ಎಂದು ಅವರು ಹೇಳಿದರು. ತಜ್ಞರ ಅಭಿಪ್ರಾಯ ಪಡೆದ ಬಳಿಕ ಲಾಕ್ ಡೌನ್ ಮುಂದುವರೆಸಬೇಕೆ ಅಥವಾ ಅನ್ ಲಾಕ್ ಮಾಡಬೇಕೆ ಎಂಬ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಜೂನ್ 7 ರೊಳಗೆ ಸೋಂಕಿನ ಪ್ರಮಾಣ ರಾಜ್ಯದಲ್ಲಿ 5ಸಾವಿರದ ಒಳಗೆ ಬಂದರೆ ಮಾತ್ರ ಅನ್ ಲಾಕ್ ಮಾಡಬಹುದು. ಸೋಂಕು ಕಡಿಮೆ ಆಗಲಿಲ್ಲವಾದರೆ ಅನ್ ಲಾಕ್ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ