Breaking News
Home / ರಾಜ್ಯ / ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಪೊಲೀಸ್ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಖೋಟಾ ನೋಟುಗಳ ವಶ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಪೊಲೀಸ್ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಖೋಟಾ ನೋಟುಗಳ ವಶ

Spread the love

ದಾಂಡೇಲಿ – ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಪೊಲೀಸ್ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.
 ಖೋಟಾನೋಟು ವ್ಯವಹಾರ ಮಾಡುತ್ತಿದ್ದ 6 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ.
ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ ಪೂಜಾರಿ(42), ಬೆಳಗಾವಿಯ ಅಮರ ನಾಯ್ಕ(30), ಸಾಗರ ಕುಣ್ಣೂರ್ಕರ್(28), ದಾಂಡೇಲಿಯ ಶಬ್ಬೀರ್ ಕುಟ್ಟಿ(45), ಶಿವಾಜಿ ಕಾಂಬ್ಳೆ(52) ಬಂಧನಕ್ಕೊಳಗಾದವರು.
ಡಿಡಿಎಲ್ ವನಶ್ರೀ ಭಾಗದ ಶಿವಾಜಿ ಕಾಂಬ್ಳೆ ಎನ್ನುವವರ ಮನೆಯಲ್ಲಿ ವಶಕ್ಕೆ ಪಡೆಯಲಾಗಿದೆ. 4.5 ಲಕ್ಷ ಅಸಲಿ ನೋಟು ಪಡೆದು 9 ಲಕ್ಷ ನಕಲಿ ನೋಟು ನೀಡಲು ಮುಂದಾಗಿದ್ದ ವೇಳೆ ದಾಳಿ ನಡೆಸಲಾಗಿದೆ.
ವ್ಯವಹಾರಕ್ಕೆ ಬಳಸಿದ್ದ ಎರಡು ಕಾರು ವಶಪಡಿಸಿಕೊಂಡಿದ್ದಾರೆ. ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ್ ಕಾರ್ಯವನ್ನು ಎಸ್ಪಿ ಪ್ರಶಂಸಿಸಿದ್ದಾರೆ

Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ