ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ದಿಢೀರ್ ದೆಹಲಿಗೆ ತೆರಳಿರುವ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದೀಗ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.
ದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಬಿ.ವೈ.ವಿಜಯೇಂದ್ರ, ಅರುಣ್ ಸಿಂಗ್ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕಾರಣದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅರುಣ್ ಸಿಂಗ್ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಅರುಣ್ ಸಿಂಗ್ ಭೇಟಿ ಬಳಿಕ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನೂ ವಿಜಯೇಂದ್ರ ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಚಿವ ಸಿ.ಪಿ.ಯೋಗೇಶ್ವರ್ ದೆಹಲಿ ಭೇಟಿ, ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿಎಂ ಬಿ ಎಸ್ ವೈ ಪುತ್ರ ವಿಜಯೇಂದ್ರ ಅವರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದ್ದು, ಯೊಗೇಶ್ವರ್ ಅವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ ಎಂಬ ಮಾತುಗಳೂ ಕೇಳಿಬರುತ್ತಿದೆ.
Laxmi News 24×7